ಜಿಲ್ಲೆ

ಚಾಲುಕ್ಯ ಉತ್ಸವಕ್ಕೆ ಪ್ರಸ್ತಾವನೆ ಸಲ್ಲಿಸಿ

ಬಾಗಲಕೋಟೆ: ಜಿಲ್ಲೆಯಲ್ಲಿ ಚಾಲುಕ್ಯ ಉತ್ಸವ ಆಯೋಜಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಸೂಚಿಸಿದರು.


ಜಿಲ್ಲಾ ಪಂಚಾಯಿತಿ ಹಳೇ ಸಭಾಂಗಣದಲ್ಲಿ ಬುಧವಾರ ಜರುಗಿದ ವಿವಿಧ ಇಲಾಖೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯತ್ತ ಪ್ರವಾಸಿಗರು ಹರಿದು ಬರುತ್ತಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಜಿಲ್ಲೆಗೆ ಸೆಳೆಯಲು ಚಾಲುಕ್ಯ ಉತ್ಸವ ಒಂದು ಉತ್ತಮ ವೇದಿಕೆಯಾಗಿದೆ. ಕೋವಿಡ್ ಕಾರಣದಿಂದ ಯಾವುದೇ ಉತ್ಸವಗಳಾಗದೇ ಅನುದಾನ ಕೂಡ ಹಾಗೆ ಉಳಿದುಕೊಂಡಿದೆ. ಹೀಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಚಾಲುಕ್ಯ ಉತ್ಸವ ಆಯೋಜಿಸುವ ಕಾರ್ಯವಾಗಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗೆ ತಿಳಿಸಿದರು.


ಕಂದಾಯ ಇಲಾಖೆಯಿಂದ ನೀಡುವ ಭೂಮಿ, ಎ.ಜೆ.ಎಸ್.ಕೆ ಹಾಗೂ ಸಕಾಲ ಸೇವೆಗಳಲ್ಲಿ ಬಾಗಲಕೋಟೆ ಜಿಲ್ಲೆ ಅಕ್ಟೋಬರ ಮಾಹೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಸಂತೋಷದ ವಿಷಯ. ಇದಕ್ಕೆ ಶ್ರಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಇದೇ ಸಂದರ್ಭದಲ್ಲಿ ಅಭಿನಂಧನೆ ಸಲ್ಲಿಸಿದರು.


ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಯಾವುದೇ ಬಿತ್ತನೆ ಬೀಜದ ಕೊರತೆ ಇರುವದಿಲ್ಲ. ಅಕ್ಟೋಬರ ಮಾಹೆಯಿಂದ ಇಲ್ಲಿವರೆಗೆ ಒಟ್ಟಾರೆಯಾಗಿ 79488 ಮೆಟ್ರಿಕ್ ಟನ್ ರಸಗೊಬ್ಬರಗಳು ಹಂಚಿಕೆಯಾಗಿದ್ದು ಸದ್ಯಕ್ಕೆ ಯಾವುದೇ ರಸಗೊಬ್ಬರದ ಕೊರತೆ ಇರುವದಿಲ್ಲ ಮತ್ತು ಮುಂದೆ ಕೂಡ ಯಾವದೇ ರಸಗೊಬ್ಬರದ ಸರಬರಾಜು, ಮಾರಾಟದಲ್ಲಿ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.


ಇ-ಕೆವೈಸಿ ಅಪ್ಡೇಶನಗಾಗಿ ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಕಾರದೊಂದಿಗೆ ನವ್ಹಂಬರ್ ಮಾಹೆಯಲ್ಲಿ ಶೇ.73 ರಷ್ಟು ಫಲಾನುಭವಿಗಳ ಇ-ಕೆವೈ ಸಿ ಮಾಡಗಿದ್ದು, ಆಧ್ಯತೆ ಮೆರೆಗೆ ಕ್ರಮವಹಿಸಿ ಮುಂದಿನ ಸಭೆ ಸೇರುವದರೊಳಗಾಗಿ ಶೇ.100 ರಷ್ಟು ಇ-ಕೆವೈಸಿ ಮಾಡಲಾಗುವುದೆಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಸಭೆಗೆ ಮಾಹಿತಿ ನೀಡಿದರು.
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕಾಗಿ ಈಗಾಗಲೇ ಲಸಿಕಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ರೋಗಗ್ರಸ್ತ ಜಾನುವಾರುಗಳಿಗೆ ಜಿಲ್ಲಾ ಪಂಚಾಯತ್ ಅನುದಾನದಡಿಯಲ್ಲಿ ಈ ರೋಗಕ್ಕೆ ಅವಶ್ಯವಿರುವ ಔಷಧಿಗಳನ್ನು ತುರ್ತಾಗಿ ಖರೀದಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮ ಪಂಚಾಯತ್ ಗಳ ಮೂಲಕ ಪ್ರತಿಯೊಂದು ಹಳಳಿಯಲ್ಲೂ ಫಾಗಿಂಗ್ ಮತ್ತು ಸ್ಯಾನಟೈಜಶನ್ ಕೈಗೊಳ್ಳಲಾಗುತ್ತಿದ್ದು, ರೋಗ ನಿಯಂತ್ರಣದಲ್ಲಿರುತ್ತದೆ. ಮರಣ ಹೊಂದಿದ ಜಾನುವಾರುಗಳಿಗೆ ಸರಕಾರ ನಿಗದಿಪಡಿಸಿದ ಪರಿಹಾರ ಧನ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಸಭೆಯಲ್ಲಿ ಅರಣ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ , ಹಿಂದುಳದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ಇತರೆ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.


ಈ ಸಂದರ್ಭಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ. ಭೂಬಾಲನ್, ಕೃಷ್ಣಾ ಮೆಲ್ದಂಡೆ ಯೋಜನಾ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡೆ, ಪ್ರೋಬೇಶನರಿ ಐ ಎ ಎಸ್ ಅಧಿಕಾರಿ ರಮೇಶ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.