ಜಿಲ್ಲೆ

ಚಿಂಚೋಳಿ: ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ನಾಳೆ

ಕೃಷ್ಣ ಕುಲಕರ್ಣಿ

ಚಿಂಚೋಳಿ: ಪಟ್ಟಣದ ತಾಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ 25ರಂದು ಮಧ್ಯಾಹ್ನ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ರಾಠೋಡ್ ತಿಳಿಸಿದ್ದಾರೆ.

ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾವಾರು ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.