ಚಿಂಚೋಳಿ; ಪ್ರಥಮ ಬಾರಿಗೆ ತಾಲೂಕಿಗೆ ಆಗಮಿಸಿದ ಸೇಡಂ ಶಾಸಕರೂ ಆದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರನ್ನು ಕಾಂಗ್ರಸ್ ಕಾರ್ಯಕರ್ತರು ಸನ್ಮಾನಿಸಿದರು.
ಬಸವೇಶ್ವರ ವೃತ್ತದಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿ, ಸಚಿವರಿಗೆ ಅದ್ದೂರಿ ಸ್ವಾಗತ ಕೋರಿದರು. ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ತಾಲೂಕು ಅಧ್ಯಕ್ಷ ಸಂತೋಷ ಗುತ್ತೇದಾರ್ ನೇತೃತ್ವದಲ್ಲಿ ಜೆಸಿಬಿ ಯಂತ್ರದ ಮೂಲಕ ಹೂ ಸುರಿಮಳೆ ಸುರಿಸಲಾಯಿತು.
ಕಾಂಗ್ರೇಸ್ ಮುಖಂಡ ಸುಭಾಷ್ ರಾಠೋಡ, ಅನೀಲಕುಮಾರ ಜಮಾದಾರ, ಶರಣು ಪಾಟೀಲ, ಅಬ್ದುಲ್ ಬಾಸೀದ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.