ಜಿಲ್ಲೆ

ಚಿಂಚೋಳಿ ಸಿದ್ಧಸಿರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಆಗ್ರಹಿಸಿ ನ.4ರಿಂದ ಧರಣಿ

ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒಡೆತನದ ಚಿಂಚೋಳಿಯ ಸಿದ್ಧಸಿರಿ ಸಕ್ಕರೆ ಕಾರ್ಖಾನೆ ಮರು ಆರಂಭಿಸಬೇಕು ಎಂದು ಆಗ್ರಹಿಸಿ ನ.೪ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಜಗದೀಶ ಪಾಟೀಲ್​ ಹೇಳಿದರು. ಚಿಂಚೋಳಿ, ಚಿತ್ತಾಪುರ, ಸೇಡಂ, ಕಾಳಗಿ ಮತ್ತು ಕಮಲಾಪುರ ಸೇರಿ ಅಕ್ಕಪಕ್ಕದ ಜಿಲ್ಲೆ ರೈತರಿಗೆ ಸಹಕಾರಿಯಾಗಿರುವ ಸಿದ್ಧಸಿರಿ ಕಾರ್ಖಾನೆ ವಿಷಯದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಪಕ್ಷಭೇದ ಮರೆತು ರೈತರ ಒಳಿತಿಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಪರಿಸರ ಸಚಿವ ಈಶ್ವರ ಖಂಡ್ರೆ ಸರ್ಕಾರದ ಮೇಲೆ ಒತ್ತಡ ಹೇರಿ ಆರಂಭಕ್ಕೆ ಮುಂದಾಗಬೇಕು ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕೋರಿದರು. ಕಾರ್ಖಾನೆ ಆರಂಭಕ್ಕೆ ನ.೧ರವರೆಗೆ ಗಡುವು ನೀಡಿದ್ದು, ಅಷ್ಟರೊಳಗೆ ಸ್ಪಂದಿಸದಿದ್ದರೆ ೪ರಂದು ಅನಿರ್ದಿಷ್ಟ ಧರಣಿ ಆರಂಭಿಸುವುದಾಗಿ ಎಚ್ಚರಿಸಿದರು. ಸಂಘದ ಜಿ¯್ಲÁ ಕಾರ್ಯದರ್ಶಿ ಧರ್ಮರಾಜ ಸಾಹು, ಪ್ರಮುಖರಾದ ಬಸವರಾಜ ಪಾಟೀಲ್, ಶಾಂತವೀರ ದಸ್ತಾಪುರ, ಶಾಂತವೀರಪ್ಪ ಹೆಬ್ಬಾಳ, ಕರಬಸಪ್ಪ ಉಜ್ಜಾ ಇತರರಿದ್ದರು.