ನಾಗರಮುನ್ನೋಳಿ: ಬೈಕ್&ಲಾರಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಗ್ರಾಮದ ರುದ್ರಪ್ಪ ತಮ್ಮಣ್ಣ ಚೌಗಲಾ (38) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈಚೆಗೆ ರಾಯಬಾಗದಿಂದ ನಾಗರಮುನ್ನೋಳಿಗೆ ತೆರೆಳುತ್ತಿರುವ ವೇಳೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರು ಗಂಭಿರ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಲಿಸದೆ ಗುರುವಾರ ಹಿಂಬದಿ ಸವಾರ ಸಾವನ್ನಪ್ಪಿದ್ದ. ಶುಕ್ರವಾರ ಬೈಕ್ ಸವಾರನು ಸಾವನ್ನಪ್ಪಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡ ರಾಯಬಾಗ ಪೊಲೀಸರು ತಿಳಿಸಿದ್ದಾರೆ.