ಚಿತ್ರದುರ್ಗ: ವಿಧಾನ ಪರಿಷತ್ ಅಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯ ಮಂತ್ರಿ ಬಸವರಾಜಬೊಮ್ಮಾಯಿ,ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,ಮಾಜಿ ಡಿಸಿಎಂ ಗೋವಿಂದ ಕಾರಜೋಳ,ಮಾಜಿ ಸಚಿವ ರಾದ ಭೈರತಿ ಬಸವರಾಜು,ಸಿ.ಟಿ.ರವಿ ಅವರು ಅವರು ಮೇ 25ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿ,ಪಕ್ಷದ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ ಅವರ ಪರ ಮತಯಾಚನೆ ಮಾಡಲಿದ್ದಾರೆ.
ಮಧ್ಯಾಹ್ನ 12ಗಂಟೆಗೆ ನಗರದ ವಿನಾಯಕ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿರುವ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಶಾಸಕ ಡಾ.ಎಂ ಚಂದ್ರಪ್ಪ,ಎಂಎಲ್‌ಸಿಗಳಾದ ಕೆ.ಎಸ್.ನವೀನ್,ಚಿದಾನಂದಗೌಡ,ತಿಪ್ಪೇಸ್ವಾಮಿ,ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ,ನೇರ‌್ಲ ಗುಂಟೆ ತಿಪ್ಪೇಸ್ವಾಮಿ,ಎಸ್.ಕೆ.ಬಸವರಾಜನ್,ಎಚ್.ಎಸ್.ಶಿವಶಂಕರ್,ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್‌ಶಹಾಪುರ,ಪಕ್ಷದ ಜಿಲ್ಲಾಧ್ಯಕ್ಷ ಎ.ಮುರಳಿ,ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ ಮತ್ತಿತರ ಪ್ರಮುಖರು ಸಭೆಯಲ್ಲಿ ಹಾಜರಿರುತ್ತಾರೆ ಎಂದು ಪಕ್ಷದ ಜಿಲ್ಲಾ ವಕ್ತಾರ ದಗ್ಗೆ ಶಿವಪ್ರಕಾಶ್ ತಿಳಿಸಿದ್ದಾರೆ.