???????????????????????????????????? 
ಜಿಲ್ಲೆ

ಚಿದಂಬರ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೀದರ್: ನಗರದ ಚಿದಂಬರ ಶಿಕ್ಷಣ ಸಂಸ್ಥೆ ಕಚೇರಿಯಲ್ಲಿ ಸಂಸ್ಥೆಯ ಸಂಚಾಲಿತ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಮಹಾವಿದ್ಯಾಲಯ, ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆ ಸೇರಿದಂತೆ ವಿವಿಧ ಅಂಗ ಸಂಸ್ಥೆಗಳಿಂದ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಂಸ್ಥೆಯ ಅಧ್ಯಕ್ಷ ಡಾ. ಶಿವಕುಮಾರ ಸ್ವಾಮೀಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ಮೇಲೆ ಬೆಳಕು ಚೆಲ್ಲಿದರು.
ವಿವಿಧ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಸಹ ಕಾರ್ಯದರ್ಶಿ ಬಸವರಾಜ ಶೆಟಕಾರ್, ನಿರ್ದೇಶಕರಾದ ಸುಭಾಷ್ ಉಪ್ಪೆ, ಮಡಿವಾಳಪ್ಪ ಗಂಗಶೆಟ್ಟಿ, ಆಡಳಿತಾಧಿಕಾರಿ ಹಾವಗಿರಾವ್ ಮೈಲಾರೆ, ಎನ್.ಕೆ. ಜಾಬಶೆಟ್ಟಿ ಆಯುರ್ವೇದಿಕ್ ವೈದ್ಯಕೀಯ ಕಾಲೇಜು ಪ್ರಾಚಾರ್ಯ ಚಂದ್ರಕಾಂತ ಹಳ್ಳಿ, ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ, ಸಿದ್ಧಾರೂಢ ಸ್ವಾಮಿ ಡಿ.ಎಲ್.ಇಡಿ ಕಾಲೇಜು ಪ್ರಾಚಾರ್ಯ ಮಾಣಿಕರಾವ್ ಪಾಂಚಾಳ, ಸಿದ್ಧಾರೂಢ ಪಬ್ಲಿಕ್ ಶಾಲೆ ಮುಖ್ಯಶಿಕ್ಷಕ ಶಿವಕುಮಾರ ರಾಮಚಂದ್ರನ್, ಶಿವಕುಮಾರೇಶ ಗುರುಕುಲ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮ್ಯಾಗೇರಿ ಇದ್ದರು.
ಪ್ರೌಢಶಾಲೆ ಶಿಕ್ಷಕ ನಾಗನಾಥ ಬಿರಾದಾರ ನಿರೂಪಿಸಿದರು. ಶೆಟಕಾರ್ ಪ್ರೌಢಶಾಲೆ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ಸ್ವಾಗತಿಸಿದರು. ಪದವಿ ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ ವಂದಿಸಿದರು.