ಚಾಮರಾಜನಗರ: ತಾಲೂಕಿನ ಬಸವಾಪುರ ಗ್ರಾಮದ ಜಮೀನೊಂದರಲ್ಲಿ ಬುಧವಾರ ಚಿರತೆ ದಾಳಿಗೆ ಕರು ಬಲಿಯಾಗಿದೆ.
ತಾಲೂಕಿನ ಕೋಡಿಮೋಳೆ ಗ್ರಾಮದ ಗುಮಟಾಪುರ ನಾಗರಾಜು ಎಂಬುವವರಿಗೆ ಸೇರಿದ ಕರುವನ್ನು ಜಮೀನಿನಲ್ಲಿ ಮೇಯಲು ಬಿಟ್ಟಿದ್ದರು. ಈ ವೇಳೆ ಚಿರತೆ ದಿಢೀರನೇ ದಾಳಿ ನಡೆಸಿ ಕರುವನ್ನು ಕೊಂದು, ತಿಂದು ಹಾಕಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿರತೆ ದಾಳಿಗೆ ಮೃತಪಟ್ಟಿರುವ ಕರುವಿನ ಮಾಲೀಕರಿಗೆ ಸೂಕ್ತ ಪರಿಹಾರ ಕೊಡಿಸುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿದರು.