ಚಾಮರಾಜನಗರ: ತಾಲೂಕಿನ ತಮ್ಮಡಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿದೆ. ಗ್ರಾಮದ ರೈತ ಮಹದೇವಶೆಟ್ಟಿ ಅವರಿಗೆ ಸೇರಿದ ಹಸು ಮೃತಪಟ್ಟಿದೆ. ಬುಧವಾರ ರಾತ್ರಿ ಜಮೀನಿನಲ್ಲಿ ಹಸುವನ್ನು ಕಟ್ಟಿ ಹಾಕಿದ್ದಾಗ ಚಿರತೆ ದಾಳಿ ಮಾಡಿದ್ದು, ಪರಿಣಾಮ ಹಸು ಸತ್ತು ಹೋಗಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.