ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭಾನುವಾರ ಸಚಿವ, ಭಟ್ಕಳ-ಹೊನ್ನಾವರ ಶಾಸಕ ಮಂಕಾಳ ಸುಬ್ಬ ವೈದ್ಯ ಭೇಟಿ ನೀಡಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಸದಸ್ಯರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ಆದಿಚುಂಚನಗಿರಿಗೆ ಭೇಟಿ ನೀಡಿ ಶ್ರೀ ಕಾಲಭೈರವೇಶ್ವರಸ್ವಾಮಿ ಹಾಗೂ ಸ್ತಂಭಾಂಭಿಕೆ ಸೇರಿದಂತೆ ಕ್ಷೇತ್ರಾಧಿದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಭಾನುವಾರ ವಿಶೇಷವಾಗಿ ದೇವಾಲಯದ ಒಳಾವರಣದಲ್ಲಿ ನಡೆಯುವ ಶ್ರೀಕಾಲಭೈರವೇಶ್ವರಸ್ವಾಮಿ ಹಾಗೂ ಶ್ರೀಬಾಲಗಂಗಾಧರನಾಥ ಸ್ವಾಮೀಜಿಯ ರಥೋತ್ಸವವದಲ್ಲಿ ರಥ ಎಳೆದು ಈಡುಗಾಯಿ ಒಡೆದು ಭಕ್ತಿ ಸಮರ್ಪಿಸಿದರು.
ನಂತರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಶ್ರೀಮಠದ ವತಿಯಿಂದ ನೂತನ ಸಚಿವ ಮಾಂಕಾಳು ವೈದ್ಯರನ್ನು ಸನ್ಮಾನಿಸಲಾಯಿತು
ಮಠದ ಕಾರ್ಯದರ್ಶಿ ಶ್ರೀಪ್ರಸನ್ನನಾಥ ಸ್ವಾಮೀಜಿ ಇದ್ದರು.