???????????????????????????????????? 
ಜಿಲ್ಲೆ

ಚುನಾವಣೆ ಬಜೆಟ್

ಬೀದರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಮಂಡಿಸಿದ ಪ್ರಸಕ್ತ ವರ್ಷದ ಬಜೆಟ್ ಚುನಾವಣೆ ದೃಷ್ಟಿಕೋನದಲ್ಲಿ ಇಟ್ಟುಕೊಂಡು ಮಂಡಿಸಿದ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಟೀಕಿಸಿದ್ದಾರೆ.
ಬಜೆಟ್‍ನಲ್ಲಿ ಯಾವುದೇ ಗೊತ್ತು, ಗುರಿ ಇಲ್ಲ. ಜನ ಪರ, ಅಭಿವೃದ್ಧಿ ಪರ ಕಾಳಜಿಯೂ ಇಲ್ಲ ಎಂದು ಹೇಳಿದ್ದಾರೆ.
ಜನಸಾಮಾನ್ಯರ ಬಾಳು ಬೆಳಗಿಸುವ ಯೋಜನೆಗಳಿಲ್ಲ. ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ. ರೈತರ ನೆರವಿಗೆ ಧಾವಿಸಿಲ್ಲ. ಗ್ರಾಮಾಭಿವೃದ್ಧಿಗೆ ಆದ್ಯತೆ ಕೊಟ್ಟಿಲ್ಲ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಗದಾ ಪ್ರಹಾರ ಮಾಡಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.