The Chief Minister of Karnataka, Shri Basavaraj Bommai calling on the Union Minister for Defence, Shri Rajnath Singh, in New Delhi on July 30, 2021. 
ಜಿಲ್ಲೆ

ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಯಾವುದೇ ಮಠಾಧೀಶರು ಚರ್ಚೆ ಮಾಡಿಲ್ಲ

ಹುಬ್ಬಳ್ಳಿ: ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಯಾವುದೇ ಮಠಾಧೀಶರು ನನ್ನನ್ನು ಸಂರ್ಪಸಿಲ್ಲ. ನನ್ನ ಜತೆ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಹಗರಣವನ್ನು ಸಿಬಿಐಗೆ ವಹಿಸಲಾಗುವುದು ಎಂದು ಯಾರು ಹೇಳಿದ್ದಾರೆ. ಈಗಾಗಲೇ ಹಗರಣಕ್ಕೆ ಸಂಬಂಧಿಸಿದಂತೆ ಆಯೋಗವು ವರದಿ ನೀಡಿದೆ. ಈ ಕುರಿತು ಮುಂದಿನ ಸಂಪುಟ

ಸಭೆಯಲ್ಲಿ ಚರ್ಚೆ ನಡೆಸಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.

ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ಧಮೇಂದ್ರ ಪ್ರಧಾನ ಹಾಗೂ ಮನ್ಸೂರ್ ಮಾಂಡವಿಯಾ ರಾಜ್ಯದಲ್ಲೇ ಇದ್ದು ಪಕ್ಷಕ್ಕೆ ಮಾರ್ಗದರ್ಶನ ಮಾಡುವ ಸಾಧ್ಯತೆ ಇದೆ. ಕಳೆದ ಚುನಾವಣೆಯಲ್ಲಿ ಅಮಿತ್ ಷಾ ಇದ್ದರೂ, ಈ ಬಾರಿ ಅವರು ಸಹ ರಾಜ್ಯ ಪ್ರವಾಸ ಮಾಡುವರು. ಸೋನಿಯಾಗಾಂಧಿ ರಾಜಕೀಯ ನಿವೃತ್ತಿ ವಿಚಾರವು ಅವರಿಗೆ ಹಾಗೂ ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಆ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.

7 ವೇತನ ಆಯೋಗ ಜಾರಿಗಾಗಿ ಮಾರ್ಚ್ 1ರಿಂದ ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯನ್ನು ಅವರು ಮತ್ತಷ್ಟು ಬಲಪಡಿಸ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.