ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್‌ಗೆ ಹಿಮಾಂಶು ಜೋಶಿ ಭೇಟಿ ನೀಡಿ ಪರಿಶೀಲಿಸಿದರು. 
ಜಿಲ್ಲೆ

ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ

Chamarajanagar

ಗುಂಡ್ಲುಪೇಟೆ: ತಾಲೂಕಿನ ಮದ್ದೂರು ಹಾಗೂ ಕೆಕ್ಕನಹಳ್ಳ ಚೆಕ್‌ಪೋಸ್ಟ್‌ಗಳಿಗೆ ಶನಿವಾರ ಐಆರ್‌ಎಸ್ ಅಧಿಕಾರಿ ಹಿಮಾಂಶು ಜೋಶಿ ಭೇಟಿ ನೀಡಿ ಪರಿಶೀಲಿಸಿದರು.
ತಮಿಳುನಾಡು ಹಾಗೂ ಕೇರಳ ರಾಜ್ಯದ ಗಡಿಗಳ ಮೂಲಕ ಪ್ರತಿ ದಿನವೂ ಸಾವಿರಾರು ವಾಹನಗಳು ಸಂಚರಿಸುವುದರಿಂದ ಸರಕು ಸಾಗಣೆ ಸೇರಿದಂತೆ ಪ್ರಯಾಣಿಕರ ಎಲ್ಲ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಚುನಾವಣಾಧಿಕಾರಿ ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿ ಇದ್ದರು.