ಚಿಕ್ಕಮಗಳೂರು: ಪ್ರತಿಯೊಬ್ಬ ಮನಷ್ಯನಿಗೂ ಉತ್ತಮ ಆರೋಗ್ಯ ಬಹು ಮುಖ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆಯೂ ಫಾಸ್ಟ್ ಫುಡ್‌ಗಳಿಗೆ ಮಾರು ಹೋಗಿ ನಮ್ಮ ಸಾಂಸ್ಕೃತಿಕ ಆಹಾರ ಪದ್ಧತಿ ಮರೆಯಾಗುತ್ತಿದೆ. ಅಂಥವರಲ್ಲಿ ಹಣ್ಣು ಹಾಗೂ ತರಕಾರಿಗಳ ಮಹತ್ವವನ್ನು ಪರಿಚಯಿಸುವುದು ನಮ್ಮ ಕರ್ತವ್ಯ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ ತಿಳಿಸಿದರು.
ಗಣರಾಜ್ಯೋತ್ಸವದ ಅಂಗವಾಗಿ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿರುವ ಚೈತ್ರೋತ್ಸದಲ್ಲಿ ಮಂಗಳವಾರ ನಡೆದ ಫಲ ಪಾಕ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಮ್ಮ ದೈನಂದಿನ ಆಹಾರ ಪದ್ಧತಿಯೂ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಾವು ಸೇವಿಸುವ ಆಹಾರವು ನಮ್ಮ ದೇಹಕ್ಕೆ ಅಗತ್ಯವಿರುವ ಪೌಷ್ಠಿಕಾಂಶಗಳಿAದ ಕೂಡಿರಬೇಕು. ಪೌಷ್ಠಿಕ ಆಹಾರ ಸೇವನೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಯುವ ಜನತೆ ಸೇರಿದಂತೆ ಪ್ರತಿಯೊಬ್ಬ ಸಾರ್ವಜನಿಕರು ಹಣ್ಣು ಮತ್ತು ತರಕಾರಿಗಳಿಂದ ತಯಾರಿಸಿದ ಆಹಾರ ಖಾದ್ಯಗಳ ಅಗತ್ಯತೆ ಹಾಗೂ ಮಹತ್ವವನ್ನು ತಿಳಿದು ಆರೋಗ್ಯದಿಂದಿರಿ ಎಂದು ಸಲಹೆ ನೀಡಿದರು.
ತೊಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ನೇತ್ರಾವತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸಾರ್ವಜನಿಕರಲ್ಲಿ ಹಣ್ಣು, ತರಕಾರಿಗಳಿಂದ ತಯಾರಾದ ಆಹಾರಗಳ ಮಹತ್ವವನ್ನು ತಿಳಿಸಲು ಫಲ ಪಾಕ ಸ್ವರ್ಧೆ ಕಾರ್ಯಕ್ರಮಗಳು ಉತ್ತಮ ವೇಧಿಕೆಯಾಗಿದೆ. ಈ ಸ್ಫರ್ಧೆಯಲ್ಲಿ ೨೫ಕ್ಕು ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದಾರೆ. ಇಂತಹ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚು ಆಸಕ್ತಿ ತೋರಿದಲ್ಲಿ ಇನ್ನಷ್ಟು ಸ್ಫರ್ಧೆಗಳನ್ನು ಆಯೋಜಿಸಲು ಉತ್ತೇಜನ ನೀಡಿದಂತಾಗುತ್ತದೆ. ಪ್ರತಿಯೊಬ್ಬರು ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಲಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ. ಸೇರಿದಂತೆ ತೋಟಗಾರಿಕೆ ಇಲಾಖೆ ಅಧಿಕಾರಿ, ಸಿಬ್ಬಂದಿ ಉಪಸ್ಥಿತರರಿದ್ದರು.