ಜಿಲ್ಲೆ

ಜ.1 ರಂದು ಭೀಮ ಕೋರೆಗಾಂವ್ ವಿಜಯೋತ್ಸವ

ಕೊಳ್ಳೇಗಾಲ: ಪಟ್ಟಣದಲ್ಲಿ ಭೀಮ ಕೋರೆಗಾಂವ್ ವಿಜಯೋತ್ಸವ ಸಮಿತಿ ವತಿಯಿಂದ ಜ.1 ರಂದು ಬೆಳಗ್ಗೆ 10 ಗಂಟೆಗೆ 207ನೇ ವರ್ಷದ ಭೀಮ ಕೋರೆಗಾಂವ್ ವಿಜಯೋತ್ಸವ ಬೃಹತ್ ಮೆರವಣಿಗೆ ಆಯೋಜಿಸಲಾಗಿದೆ. ಎಂಜಿಎಸ್‌ವಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಭೀಮ ಕೋರೆಗಾಂವ್ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದೆ. ಬಸ್ ನಿಲ್ದಾಣ, ಡಾ.ರಾಜ್‌ಕುಮಾರ್ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮಾರ್ಗವಾಗಿ ಸಾಗಿ ಅಂಬೇಡ್ಕರ್ ಪುತ್ಥಳಿ ಆವರಣಕ್ಕೆ ತಲುಪಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಭೀಮ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಮಣಿ ಹಾಗೂ ಶಂಕರ ಚೇತನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.