ಜಿಲ್ಲೆ

ಜ. 18ರಂದು ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಾಮರಾಜನಗರ ತಾಲೂಕುಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಜ.18 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಶಾಸಕರು ಹಾಗೂ ಎಂ.ಎಸ್.ಐ.ಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಕ್ರೀಡಾಕೂಟ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. ನಗರಸಭೆ ಸದಸ್ಯ ಸಿ.ಜಿ ಚಂದ್ರಶೇಖರ್, ತಹಶೀಲ್ದಾರ್ ಬಿ.ಗಿರಿಜಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪಿ.ಶ್ರೀನಿವಾಸ್, ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಹನುಮಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.