ಜಿಲ್ಲೆ

ಜ.19ರಂದು ಬಂಡಿಪುರ ಕಚೇರಿ ಉದ್ಘಾಟನೆ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕರ ಆಡಳಿತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಜ.19ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ.

ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ಈಶ್ವರ್ ಬಿ. ಖಂಡ್ರೆ ಉದ್ಘಾಟನೆ ನೆರವೇರಿಸಲಿದ್ದು, ಪಶು ಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದು, ಇತರೆ ಗಣ್ಯರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.