ಚಾಮರಾಜನಗರ: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಜ.19ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಗ್ಗೆ 10.30 ಗಂಟೆಗೆ ಬಂಡೀಪುರಕ್ಕೆ ಸಚಿವರು ಆಗಮಿಸುವರು. ಬಳಿಕ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದಲ್ಲಿ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11 ಗಂಟೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮತ್ತು ರಾಷ್ಟ್ರೀಯ ಉದ್ಯಾನವನದಲ್ಲಿ ಬುಡಕಟ್ಟು ಜನಾಂಗದ ಮುಖಂಡರೊಂದಿಗೆ ಸಭೆ ನಡೆಸುವರು.
ಮಧ್ಯಾಹ್ನ 12 ಗಂಟೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮತ್ತು ರಾಷ್ಟ್ರೀಯ ಉದ್ಯಾನವನದಲ್ಲಿ ಚಾಮರಾಜನಗರ ಜಿಲ್ಲೆಯ ಅರಣ್ಯ ಮತ್ತು ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪರಾಮರ್ಶನಾ ಸಭೆ ನಡೆಸುವರು. ಮಧ್ಯಾಹ್ನ 1.30 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.