ಚಿತ್ರದುರ್ಗ:ಜಿಲ್ಲಾಡಳಿತದಿಂದ 2025 ರ ಜನವರಿ 1 ರಂದು ಬೆಳಗ್ಗೆ 11 ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾ ಚಾರಿ ಸಂಸ್ಮರಣಾ ದಿನವನ್ನು ಆಚರಿಸಲಾಗುವುದು ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಡಿಸಿ ಕಚೇರಿಯಲ್ಲಿ ಶುಕ್ರವಾರ ಕಾರ‌್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಮರಶಿಲ್ಪಿ ಜಕಣಾಚಾರಿ ಕುರಿತು ಉಪನ್ಯಾಸ, ಗೀತಗಾಯನ ಏರ್ಪಡಿಸಲಾಗುವುದು ಎಂದರು.
ಜಕಣಾಚಾರಿ ಅವರು ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಸಂಸ್ಮರಣಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದರು. ಜಿಲ್ಲಾ ವಿಶ್ವಕರ್ಮ ಸಮಾಜದಿಂದ ಶಿಲ್ಪಿಯೊಬ್ಬರನ್ನು ಸನ್ಮಾನಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಬೇಕೆಂದು ಸಮಾಜದ ಮುಖಂಡರು ಕೋರಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ್, ಎಸಿ ಕಚೇರಿಯ ನರಸಿಂಹಮೂರ್ತಿ, ಜಿಲ್ಲಾ ವಿಶ್ವಕರ್ಮ ಸಮಾಜದ ಕೆ.ಟಿ.ಸುರೇಶಾಚಾರ್, ಸಿ.ಆರ್.ಸುರೇಶ್, ಎ.ಶಂಕರಾಚಾರ್, ಗೋವರ್ಧನ, ಸುರೇಶ್, ಅನಿಲ್, ಮಲ್ಲಿಕಾರ್ಜುನಾಚಾರ್, ನರೇಂದ್ರಚಾರ್ ಮತ್ತಿತರರು ಇದ್ದರು.
----