ಚಾಮರಾಜನಗರ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ಭಟ್ ಹಾಗೂ ಸದಸ್ಯ ಎಸ್.ಕೆ. ವೆಂಟಿಗೋಡಿ ಜ.20ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
20ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಅಧ್ಯಕ್ಷರು ಮೈಸೂರು ಕಾರಾಗೃಹಕ್ಕೆ ಭೇಟಿ ನೀಡಿ ಜಿಲ್ಲಾ ಕಾರಾಗೃಹದ ಅಧೀಕ್ಷಕರೊಂದಿಗೆ ಚರ್ಚೆ ನಡೆಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುವರು ಎಂದು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಅರುಣ್ ಪೂಜಾರ ತಿಳಿಸಿದ್ದಾರೆ.