ಜಿಲ್ಲೆ

ಜ.21ರಂದು ಅಂಬಿಗರ ಚೌಡಯ್ಯ, ವೇಮನ ಜಯಂತಿ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜ.21ರಂದು ಅಂಬಿಗರ ಚೌಡಯ್ಯ ಜಯಂತಿ ಹಾಗೂ ಮಹಾಯೋಗಿ ವೇಮನ ಜಯಂತಿಯನ್ನು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.