ಜಿಲ್ಲೆ

ಜ.25 ರಂದು ಅಂಬೇಡ್ಕರ್ ಪ್ರತಿಮೆ ಅನಾವರಣ

ಚಾಮರಾಜನಗರ: ತಾಲೂಕಿನ ಹೆಬ್ಬಸೂರು ಗ್ರಾಮದಲ್ಲಿ ವಿಶ್ವಜ್ಞಾನಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಜ.25 ರಂದು ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಚೇತವನ ಬುದ್ಧ ವಿಹಾರದ ಮನೋರಖ್ಖಿತ ಬಂತೇಜಿ ಸಾನಿಧ್ಯ ವಹಿಸುವರು. ಮೈಸೂರಿನ ಉರಿಲಿಂಗ ಪೆದ್ದಿಮಠದ ಪೀಠಾಧ್ಯಕ್ಷ ಶ್ರೀಜ್ಞಾನಪ್ರಕಾಶ ಸ್ವಾಮೀಜಿ ಮತ್ತು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಮೆ ಅನಾವರಣಗೊಳಿಸುವರು. ಶಾಸಕ ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.

ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಎಚ್.ಎಸ್.ಗಣೇಶ್ ಪ್ರಸಾದ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಆರ್.ಬಾಲರಾಜ್ ಮುಖ್ಯಅತಿಥಿಗಳಾಗಿ ಭಾಗವಹಿಸುವರು. ಮೈಸೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.