ಜಿಲ್ಲೆ

ಜ.25ರಂದುರಾಷ್ಟ್ರೀಯ ಮತದಾರರ ದಿನಾಚರಣೆ

ಚಾಮರಾಜನಗರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜ. 25ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರಿಡಾಂಗಣದಲ್ಲಿ ಆಯೋಜಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಕಾರ್ಯಕ್ರಮ ಉದ್ಘಾಟಿಸುವರು. ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾಲೇಜು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.