ಜಿಲ್ಲೆ

ಜ. 4ಕ್ಕೆ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆ ಮುಂದೂಡಿಕೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಜ. 4ಕ್ಕೆ ಮುಂದೂಡಲಾಗಿದೆ.

ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮಿತಿ ಸಭೆಯನ್ನು ಡಿ.27 ರಂದು ನಿಗದಿ ಮಾಡಲಾಗಿತ್ತು ಆದರೆ ಅಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಜ.೪ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆಯ ತಾಲೂಕು ಕಚೇರಿಯ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಅಹವಾಲುಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿಯ ಸದಸ್ಯರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮುಂಚಿತವಾಗಿ ಸಲ್ಲಿಸುವಂತೆ ಗುಂಡ್ಲುಪೇಟೆ ತಾಲೂಕು ಪ.ಜಾತಿ, ಪ.ವರ್ಗಗಳ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ತಹಶೀಲ್ದಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.