ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಕಂಬಾರ ಸಮಾಜದ ಮುಖಂಡ ಈರಣ್ಣ ಕಮ್ಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಸವರಾಜ ಕಮ್ಮಾರ, ಎ.ಕೆ.ಕಂಬಾರ, ಪರಶುರಾಮ ಕಂಬಾರ, ಮಲ್ಲಪ್ಪ ಕಂಬಾರ, ಬಸವರಾಜ ಕಂಬಾರ ಉಪಸ್ಥಿತರಿದ್ದರು. 
ಜಿಲ್ಲೆ

ಜ.೧೯ ರಂದು ಕಂಬಾರ ಸಮಾಜದ ಜಿಲ್ಲಾ ಸಮಾವೇಶ

ಬಾಗಲಕೋಟೆ: ಕಂಬಾರ (ಕಮ್ಮಾರ) ಸಮಾಜದ ಜಿಲ್ಲಾ ಸಮಾವೇಶ, ಮಹಾಶರಣ ಕಮ್ಮಾರ ಕಲ್ಲಯ್ಯ ಜಯಂತ್ಯೋತ್ಸವ ಹಾಗೂ ಗ್ರಂಥ ಬಿಡುಗಡೆ ಸಮಾರಂಭವು ಜ.೧೯ ರಂದು ಬೆಳಗ್ಗೆ ೧೧ ಗಂಟೆಗೆ ನವನಗರದ ಕಲಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜದ ಮುಖಂಡ ಈರಣ್ಣ ಕಮ್ಮಾರ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಕಲ್ಯಾಣದ ಡಾ.ಬಸವಲಿಂಗ ಪಟ್ಟದೇವರು, ಕೂಡಲಸಂಗಮದ ಮಹಾದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಎಚ್.ವೈ.ಮೇಟಿ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವಿಜಯಾನಂದ ಕಾಶಪ್ಪನವರ್ ಜ್ಯೋತಿ ಬೆಳಗಿಸುವರು ಎಂದರು.

ಶಾಸಕರಾದ ಜೆ.ಟಿ.ಪಾಟೀಲ, ಸಿದ್ದು ಸವದಿ ಕಮ್ಮಾರ ಕಲ್ಲಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಶಾಸಕರಾದ ಭೀಮಸೇನ ಚಿಮ್ಮನಕಟ್ಟಿ, ಜಗದೀಶ ಗುಡಗುಂಟಿ, ವಿ.ಪ ಸದಸ್ಯರಾದ ಪಿ.ಎಚ್.ಪೂಜಾರ, ಹನಮಂತ ನಿರಾಣಿ, ಪ್ರಕಾಶ ಹುಕ್ಕೇರಿ, ಸುನೀಲಗೌಡ ಪಾಟೀಲ ಬಿಡುಗಡೆ ಮಾಡುವರು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಆರ್.ಪಾಟೀಲ, ಮುರುಗೇಶ ನಿರಾಣಿ, ಮಾಜಿ ಶಾಸಕ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಆನಂದ ನ್ಯಾಮಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಡಾ.ಸಾಗರ ತೆಕ್ಕೆನ್ನವರ್, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ಆಗಮಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಸವರಾಜ ಕಮ್ಮಾರ, ಎ.ಕೆ.ಕಂಬಾರ, ಪರಶುರಾಮ ಕಂಬಾರ, ಮಲ್ಲಪ್ಪ ಕಂಬಾರ, ಬಸವರಾಜ ಕಂಬಾರ ಉಪಸ್ಥಿತರಿದ್ದರು.