ಬಾಗಲಕೋಟೆ ನಗರದ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್. ನರಸಾಪುರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ ಶುಕ್ರವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉಪನ್ಯಾಸಕಿ ಎಸ್.ಪಿ.ದೇಶಪಾಂಡೆ ಇದ್ದರು. 
ಜಿಲ್ಲೆ

ಜನ ಜಾಗೃತಿಯಿಂದ ಸಮಸ್ಯೆಗೆ ಪರಿಹಾರ

ಬಾಗಲಕೋಟೆ: ಜನಸಂಖ್ಯೆ ಹೆಚ್ಚಳದಿಂದಾಗುವ ಪರಿಣಾಮಗಳನ್ನು ವಿದ್ಯಾರ್ಥಿಗಳು ಅರಿತುಅದರ ನಿಯಂತ್ರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.

ನಗರದ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್. ನರಸಾಪುರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ ಶುಕ್ರವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ತಗೆದುಕೊಳ್ಳುತ್ತಿದೆ. ಇದರ ಜೊತೆಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವುದರ ಮೂಲಕ ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ಜನಸಂಖ್ಯೆ ಹೆಚ್ಚಳದಿಂದ ಅಭಿವೃದ್ಧಿಗೆ ಹಿನ್ನೆಡೆಯಾಗತ್ತದೆ. ಯುವ ಸಮುದಾಯ ಇಂತಹ ಸಂಗತಿಗಳನ್ನು ತಿಳಿದುಕೊಂಡು ಉಳಿದವರಲ್ಲೂ ಇದರ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ನಮ ್ಮದೇಶದ ಒಟ್ಟು ಜನಸಂಖ್ಯೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವಯುವ ಸಮುದಾಯದ ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅವರಲ್ಲಿ ವಿವಿಧ ಕೌಶಲಗಳನ್ನು ಬೆಳೆಸಿದಲ್ಲಿ ಅವರುದೇಶಕ್ಕೆ ಆಸ್ತಿಯಾಗಬಲ್ಲರು ಎಂದರು.

ಉಪನ್ಯಾಸಕಿ ಎಸ್.ಪಿ.ದೇಶಪಾಂಡೆ ಮಾತನಾಡಿ, ಸಶಕ್ತ ಭಾರತ ನಿರ್ಮಾಣ ಮಾಡುವಉದ್ದೇಶದಿಂದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆತರುತ್ತಿದೆ ಎಂದರು. ವಿದ್ಯಾರ್ಥಿಗಳಾದ ಸಂಗೀತಾ ಭಜಂತ್ರಿ ಮತ್ತು ಸುಗಂಧಾರಾಮೋಡಗಿ ಮಾತನಾಡಿದರು. ಸ್ವಪ್ನಾಗೌಡರ ಪ್ರಾರ್ಥಿಸಿದರು. ಉಪನ್ಯಾಸಕಿ ಎ.ಎ.ಗಂಗಲ್ ನಿರೂಪಿಸಿದರು. ಉಪನ್ಯಾಸಕಿ ಎನ್.ಎಚ್.ಹವಾಲ್ದಾರ ವಂದಿಸಿದರು.