ಹೊಸಪೇಟೆ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅಧ್ಯಕ್ಷತೆಯಲ್ಲಿ ಸೆ.27 ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದರು.
ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಜಿ.ಪಂ. ಇಸಿಒ ಹಾಗೂ ಎಸ್ಪಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಆಹವಾಲುಗಳೊಂದಿಗೆ ಜನಸ್ಪಂದನಾ ಸಭೆಯಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳುವAತೆ ತಿಳಿಸಿದ್ದಾರೆ.