ಜಿಲ್ಲೆ

ಜನತಾ ಬಜೆಟ್‌ಗಾಗಿ ಮನವಿ ಸಲ್ಲಿಕೆ

ಎ.ಎಸ್.ಮಣಿಕಂಠ

ಚಾಮರಾಜನಗರ: ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ ಮಂಡಿಸುವಂತೆ ಎಸ್‌ಡಿಪಿಐ ವತಿಯಿಂದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ನಗರದ ಪ್ರವಾಸಿ ಮಂದಿರದಲ್ಲಿ ಎಸ್‌ಡಿಪಿಐ ಜಿಲ್ಲಾ ಸಮಿತಿಯ ವತಿಯಿಂದ ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ ಮಂಡಿಸುವ ಕುರಿತು ಜಿಲ್ಲಾಧ್ಯಕ್ಷ ಕಲೀಲ್ ಉಲ್ಲಾ ಅವರ ನೇತೃತ್ವದಲ್ಲಿ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಮನವಿ ಸಲ್ಲಿಸಿದರು.

ಈ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಈ ವಿಷಯವಾಗಿ ಚರ್ಚೆಯನ್ನು ನಡೆಸಿ, ಮುಂಬರುವ ಬಜೆಟ್‌ನಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್, ಉಪಾಧ್ಯಕ್ಷ ಸಿ.ಕೆ.ನಯಾಜ್ ಉಲ್ಲಾ, ನಸ್ರುಲ್ಲಾ, ಕಾರ್ಯದರ್ಶಿ ಜಬೀನೂರ್, ಸುಹೇಲ್ ಪಾಷ, ಇಸ್ರಾರ್ ಹಾಗೂ ಇತರರು ಹಾಜರಿದ್ದರು.