ಜಿಲ್ಲೆ

ಜನತೆಗೆ, ತೊಂದರೆಯಾಗದಂತೆ, ನೋಡಿಕೊಳ್ಳಿ

,

ಯಾದಗಿರಿ: ಜಿಲ್ಲೆಯಲ್ಲಿನ ಎಲ್ಲ ಸಕರ್ಾರಿ ಆಸ್ಪತ್ರೆಗಳಲ್ಲಿ ಮೂಲಸೌಲಭ್ಯದ ಜತೆಗೆ ರೋಗಿಗಳಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಕಾರಿ ಡಾ.ಸುಶೀಲಾ ಬಿ., ಆರೋಗ್ಯ ಇಲಾಖೆ ಅಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ನಗರದ ಹೊರ ವಲಯದಲ್ಲಿನ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು ಹಾಗೂ ನಸರ್್ಗಳು ಸೌಜನ್ಯದಿಂದ ವತರ್ಿಸಬೇಕು. ಸಕರ್ಾರಿ ಆಸ್ಪತ್ರೆಗೆ ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದವರೇ ಹೆಚ್ಚಾಗಿ ಬರುತ್ತಾರೆ. ಈ ಆಸ್ಪತ್ರೆ ಸುಸಜ್ಜಿತವಾಗಿದೆ. ರೋಗಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ವೈದ್ಯರು ಸ್ಪಂದಿಸಬೇಕು. ಅಲ್ಲದೆ ಯಾವುದೇ ಕಾರಣಕ್ಕೂ ಔಷಯ ಕೊರತೆಯಾಗಬಾರದು. ವೈದ್ಯರು ಹಾಗೂ ಸಿಬ್ಬಂದಿ ವರ್ಗ ಕಡ್ಡಾಯವಾಗಿ ಸಮಯಪಾಲನೆ ಮಾಡಿ ಎಂದು ಹೇಳಿದರು.

ಜಿಲ್ಲಾಸ್ಪತ್ರೆಯ ಎಲ್ಲ ವಾಡರ್್ಗಳು, ಚುಚ್ಚು ಮದ್ದು ಕೋಣೆ, ಔಷ ದಾಸ್ತಾನು, ಶಸ್ತ್ರ ಚಿಕಿತ್ಸಾ ಕೊಠಡಿಯನ್ನು ಪರಿಶೀಲಿಸಿ, ಒಳ ರೋಗಿಗಳ ಆರೋಗ್ಯ ವಿಚಾರಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ರಿಜ್ವಾನ್ ಆಫ್ರೀನ್ ಹಾಗೂ ವೈದ್ಯರು ಇದ್ದರು.