ಬಾಗಲಕೋಟೆ: ರಾಜ್ಯದಲ್ಲಿ ಮತ್ತೆ ಮತ್ತೆ ಕೇಂದ್ರ ನಾಯಕರು ಬರುವ ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆ ತೇರದಾಳ ಕ್ಷೇತ್ರದ ಬಂಡಿಗಣಿ ಗ್ರಾಮದಲ್ಲಿ ಭಾನುವಾರ ಶ್ರೀಶೈಲ ಮಲ್ಲಿಕಾರ್ಜುನ ಭ್ರಮರಾಂಭ ದೇವಸ್ಥಾನ ಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ನಾಯಕರಿದ್ದಾರೆ. ಜನಪ್ರೀಯರಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಜನಪ್ರಿಯ ನಾಯಕರಿಲ್ಲ ಅಂದರೆ ನಾನೇನು ಮಾಡಲಿ ಎಂದು ತಿರುಗೇಟು ನೀಡಿದರು.
ಸಿದ್ದಾರಾಮಯ್ಯ ವಿರುದ್ಧದ ಅರ್ಕಾವತಿ ಡಿನೋಟಿಫಿಕೇಶನ್ ಆರೋಪ ತಾರ್ಕಿಕ ಅಂತ್ಯ ಕಾಣುತ್ತಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ಖಂಡಿಯವಾಗಿಯೂ ಅದರ ಸಂಪೂರ್ಣವಾದ ವರದಿಯನ್ನ ನೋಡಿದ್ದೇನೆ. ಅದು ಖಂಡಿತವಾಗಿಯೂ ತಾರ್ಕಿಕ ಅಂತ್ಯಕ್ಕೆ ಹೋಗಿಯೇ, ಹೋಗುತ್ತೆ. ನ್ಯಾಯ ತನ್ನ ಕಾರ್ಯವನ್ನ ನಿಶ್ಚಿತವಾಗಿ ಮಾಡಿಯೇ ಮಾಡುತ್ತದೆ. ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳಿಸುತ್ತೇವೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಹೇಳಿಕೆ ಬಗ್ಗೆ, ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದೀನಿ. ನೀವು ಬಯಸಿದಂತೆ ನಾನು ಹೇಳಲು ತಯಾರಿಲ್ಲ. ಎಲ್ಲವು ನ್ಯಾಯಾಂಗದಲ್ಲಿ ತೀರ್ಮಾನ ಆಗುತ್ತದೆ ಎಂದರು.
ಇನ್ನೂ ಶಿಗ್ಗಾವಿಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ, ಕೈ ಪಕ್ಷ ವಿನಯ್ ಕುಲಕರ್ಣಿ ಅವರನ್ನ ಕಣಕ್ಕಿಳಿಸಲಿದೆ ಎಂಬ ವಿಚಾರಕ್ಕೆ ಯಾರಾದರೂ ನಿಲ್ಲಲಿ, ನನಗೆ ನನ್ನ ಕ್ಷೇತ್ರದ ಜನರ ಮೇಲೆ ವಿಶ್ವಾಸವಿದೆ.
ಯಾರೇ ನಿಂತರೂ ಸಹ, ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ಆತ್ಮವಿಶ್ವಾಸವಿದೆ ಎಂದರು.