ಭದ್ರಾವತಿಯಲ್ಲಿ ನಮ್ಮ ಕ್ಲಿನಿಕ್‌ಅನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಉದ್ಘಾಟಿಸಿದರು. ಗೀತಾ ರಾಜ್‌ಕುಮಾರ್, ಡಾ. ಅಶೋಕ್, ಡಾ. ನಟರಾಜ್, ಒ.ಮಲ್ಲಪ್ಪ ಮತ್ತಿತರರಿದ್ದರು. 
ಜಿಲ್ಲೆ

ಜನರ ಅನುಕೂಲಕ್ಕೆ ನಮ್ಮ ಕ್ಲಿನಿಕ್ ಸೇವೆ

ಭದ್ರಾವತಿ: ಸರ್ಕಾರಿ ಆಸ್ಪತ್ರೆ ಬಗ್ಗೆ ಕೀಳರಿಮೆ ಸಲ್ಲದು, ಪ್ರತಿಯೊಬ್ಬರೂ ಗುಣಮಟ್ಟದ ನಮ್ಮ ಕ್ಲಿನಿಕ್ ಸೇವೆ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಹೇಳಿದರು.

ನಗರದ ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್‌ನಲ್ಲಿ ಜಿಲ್ಲಾಡಳಿತ, ಜಿಪಂ, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೂತನವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ, ಜನರಿಗೆ ಮೂಲ ಸೌಕರ್ಯ, ಉತ್ತಮ ಆರೋಗ್ಯ ಸೇವೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗುತ್ತಿವೆ ಎಂದು ತಿಳಿಸಿದರು.

ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗುರಿಯೊಂದಿಗೆ ನಗರಸಭೆ ವ್ಯಾಪ್ತಿಯ ಹೊಸಮನೆ, ಹನುಮಂತ ನಗರ ಮತ್ತು ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್‌ನಲ್ಲಿ ಎರಡು ಕಡೆ ನಮ್ಮ ಕ್ಲಿನಿಕ್ ಆರಂಭಿಸುವಂತೆ ಶಾಸಕರು ಸರ್ಕಾರಕ್ಕೆ ಕೋರಿದ್ದರು. ಅದರಂತೆ ಇದೀಗ ಕ್ಲಿನಿಕ್ ಆರಂಭಿಸಲಾಗುತ್ತಿದೆ ಎಂದರು.

ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್.ಗಣೇಶ್, ತಾಲೂಕು ಆರೋಗ್ಯಾಕಾರಿ ಡಾ. ಅಶೋಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ. ನಟರಾಜ್, ಒ.ಮಲ್ಲಪ್ಪ, ನಗರಸಭೆ ಸದಸ್ಯ ಚನ್ನಪ್ಪ, ಬಿ.ಕೆ.ಜಗನ್ನಾಥ್, ಆನಂದ ಮೂರ್ತಿ ಮತ್ತಿತರರಿದ್ದರು.