ವಿಜಯಪುರ : ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ‘ಅಧಿಕಾರಿಗಳ ನಡೆ ಹಳ್ಳಿಯ ಕಡೆಗೆ’ ಎಂಬ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವು ಪುನರರಾಂಭಗೊಂಡಿದ್ದು, ಗ್ರಾಮಗಳ ಜನರ ಸಮಸ್ಯೆಗಳನ್ನು ತಾವೇ ಖುದ್ದಾಗಿ ಆಲಿಸಿ, ಪರಿಹರಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಅಧಿಕಾರಿಗಳ ಸಭೆಯಲ್ಲಿ ಫೆ.19 ರಂದು ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ನಡೆಯಲಿದ್ದು, ಇಲ್ಲಿನ ಸಮಸ್ಯೆಗಳ ಅರ್ಜಿಗಳನ್ನು ಪರಿಶೀಲಿಸಿ, ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಸರ್ವರೀತಿಯಲ್ಲಿ ಸನ್ನದ್ಧರಾಗಿರಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಅಧಿಕಾರಿಗಳು ಪ್ರಾಮಾಣಿಕ ರೀತಿಯಲ್ಲಿ ಗ್ರಾಮದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರಲ್ಲಿ ವಿಶ್ವಾಸ ಮೂಡಿಸಬೇಕು. ಯಾವುದೇ ರೀತಿಯ ಲೋಪಗಳಾಗದಂತೆ ನೋಡಿಕೊಳ್ಳಬೇಕು. ಕುಂದುಕೊರತೆ ಅರ್ಜಿಗಳಿಗೆ ತಕ್ಷಣ ಸ್ಪಂದಿಸುವಂತಾಗಬೇಕು. ಸಾರ್ವಜನಿಕರು ಕೂಡ ತಮ್ಮ ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಿ, ಪರಿಹರಿಸಿಕೊಳ್ಳಬಹುದಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಮಶಾನ ಭೂಮಿ ಸಮಸ್ಯೆ, ಜಮೀನು ಕಾಲುದಾರಿ ಸಮಸ್ಯೆ, ಪಿಂಚಣಿಗೆ ಸಂಬಂಧಪಟ್ಟ, ವಿದ್ಯುತ್ ತಂತಿ, ಬಯಲು ಶೌಚಗೃಹ, ರಸ್ತೆ ಅಗಲೀಕರಣದಂತಹ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತಾಗಬೇಕು ಎಂದರು.
ಜಿ.ಪಂ. ಸಿಇಒ ರಾಹುಲ್ ಸಿಂಧೆ ಅವರು ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.