ಮಾಜಿ ಜಿಪಂ ಉಪಾಧ್ಯಕ್ಷ ಬೀಕನಹಳ್ಳಿ ಸೋಮಶೇಖರ್ 
ಜಿಲ್ಲೆ

ಜನರ ಗಮನ ಬೇರೆಡೆ ಸೆಳೆಯಲಿ ಸಚಿವ ಔತಣಕೂಟ

ಚಿಕ್ಕಮಗಳೂರು: ರಾಜ್ಯ ಸರ್ಕಾರದಲ್ಲಿ ನಡೆಯತ್ತಿರುವ ಹಗರಣಗಳು ಮತ್ತು ವ್ಯಾಪಕ ಭ್ರಷ್ಟಾಚಾರಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಸಚಿವರುಗಳ ಔತಣಕೂಟ, ಬಣ ರಾಜಕೀಯದಲ್ಲಿ ತೊಡಗಿ ಅಭಿವೃದ್ಧಿ ಕಡೆಗಣಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಹಾಗೂ ಮಾಜಿ ಜಿಪಂ ಉಪಾಧ್ಯಕ್ಷ ಬೀಕನಹಳ್ಳಿ ಸೋಮಶೇಖರ್ ಆರೋಪಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಚಿವರುಗಳು ಬಣ ರಾಜಕೀಯದಲ್ಲಿ ತೊಡಗಿ ಪರಸ್ಪರ ಹೇಳಿಕೆಗಳನ್ನು ನೀಡುವ ಮೂಲಕ ಅಭಿವೃದ್ಧಿಯ ಕಡೆ ಗಮನ ಹರಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಅತಿಥಿ ನಟರಂತೆ ಜಿಲ್ಲೆಯ ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಹೋಗುತ್ತಿದ್ದಾರೆ ಎಂದು ದೂರಿದರು.

ನಗರದ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಳೆದ ೬ ತಿಂಗಳಿನಿAದ ಉಪ ನೊಂದಣಾಧಿಕಾರಿಗಳಿಲ್ಲದೆ ತುಂಬಾ ತೊಂದರೆಯಾಗುತ್ತಿದೆ. ಜಿಲ್ಲೆಯ ಐದೂ ಶಾಸಕರುಗಳು ಕಾಣೆಯಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡು ಜನಸಾಮಾನ್ಯರು ನಿತ್ಯ ತೊಂದರೆ ಅನುಭವಿಸಬೇಕಾಗಿದೆ. ವಿವಿಧ ವಸತಿ ಯೋಜನೆಗಳು ಅನುಷ್ಠಾನಗೊಂಡಿಲ್ಲ. ಜಿಲ್ಲೆಯ ಕೇಂದ್ರವಾದ ನಗರದ ಎಲ್ಲಾ ರಸ್ತೆಗಳು ಗುಂಡಿಬಿದ್ದು ವಾಹನಗಳ ಓಡಾಟಕ್ಕೆ ತೊಂದರೆಯಾಗಿದೆ ಎಂದು ಟೀಕಿಸಿದರು.

ಭಾಗ್ಯಲಕ್ಷ್ಮಿ ಯೋಜನೆ ಹಳ್ಳ ಹಿಡಿದಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸೈಕಲ್ ಯೋಜನೆ ಸ್ಥಗಿತಗೊಂಡಿದೆ. ವಿವಿಧ ಅಭಿವೃದ್ಧಿ ನಿಗಮಗಳಿಗೆ ಅನುದಾನ ಬಿಡುಗಡೆಯಾಗದೆ ಅಭಿವೃದ್ಧಿ ಕಾರ್ಯಚಟುವಟಿಕೆಗಳು ಕುಂಠಿತಗೊAಡಿವೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ವಾರ್ಷಿಕ ಸುಮಾರು ೫೩ ಸಾವಿರ ಕೋಟಿ ರೂ. ಗಳನ್ನು ಖರ್ಚುಮಾಡಲು ಮುಂದಾಗಿರುವ ಸರ್ಕಾರ ಇದಕ್ಕೆ ಹಣ ಹೊಂದಿಸಲು ವಿದ್ಯುತ್ ದರ, ಸಾರಿಗೆ ಪ್ರಯಾಣ ದರ, ಹಾಲಿನ ದರ, ಜಮೀನು ಪಹಣಿ ಶುಲ್ಕ, ಮದ್ಯದ ದರ, ಆಸ್ತಿ ನೊಂದಣಿ ದರ, ಆಸ್ತಿ ತೆರಿಗೆ, ಕುಡಿಯುವ ನೀರಿನ ತೆರಿಗೆ ಸೇರಿದಂತೆ ವಿವಿಧ ಎಲ್ಲಾ ತೆರಿಗೆಗಳನ್ನು ಹೆಚ್ಚಿಸಿದೆ. ಜೊತೆಗೆ ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಳ ಮಾಡಿರುವುದರಿಂದ ಬಡವರು ಮತ್ತು ಕೂಲಿಕಾರ್ಮಿಕರ ಜೀವನಕ್ಕೆ ತೊಂದರೆಯಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಎಚ್.ಎಸ್ ಪುಟ್ಟಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ನೆಟ್ಟೆಕೆರೆಹಳ್ಳಿ ಜಯಣ್ಣ, ಮುಖಂಡ ಚಮಿನ್ ಉಪಸ್ಥಿತರಿದ್ದರು.