ಜಿಲ್ಲೆ

ಜನರ ನಿರೀಕ್ಷೆ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ: ಶ್ರೇಯಸ್ ಪಟೇಲ್

ಹಾಸನ: ತಾತನ ನಂತರ ಮತದಾರರು ನನ್ನ ಕೈ ಹಿಡಿದಿದ್ದಾರೆ. ಜಿಲ್ಲೆಯ ಜನರ ನಿರೀಕ್ಷೆ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾನೆ ಎಂದು ಕಾಂಗ್ರೆಸ್ ವಿಜೇತ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು
ನಗರದ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಸಂತೋಷದ ಜೊತೆಗೆ ಜವಾಬ್ದಾರಿ ಹೆಚ್ಚಾಗಿದೆ. ಜನರ ನಿರೀಕ್ಷೆ ಉಳಿಸಿಕೊಳ್ಳತ್ತಾನೆ ಕಡೂರು ಸೇರಿದಂತೆ ಎಂಟೂ ಕ್ಷೇತ್ರಗಳಲ್ಲಿ ಹಲವು ರೀತಿಯ ಸಮಸ್ಯೆ ಇವೆ. ಅವುಗಳನ್ನು ಬಗೆ ಹರಿಸಲು ಗಮನ ಹರಿಸುವೆ. ನೆನೆಗುದಿಗೆ ಬಿದ್ದಿರುವ ಹಲವು ಯೋಜನೆಗಳಿಗೆ ಪುನರ್ ಚಾಲನೆ ನೀಡಲು ಒತ್ತು ನೀಡುತ್ತಾನೆ ಎಂದು ಭರವಸೆ ನೀಡಿದರು.
ಯಾವಾಗಲೂ ಜನರ ಜೊತೆ ಇದ್ದು, ಅವರ ಕಷ್ಟ ಸುಖಗಳಿಗೆ ಸ್ಪಂದಿಸುವೆ. ಈ ಬಾರಿ ಜಿಲ್ಲೆಯಲ್ಲಿ ಜನರು ಬದಲಾವಣೆ ಬಯಸಿದ್ದರು. ಅದರೀಗ ನಿಜವಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟ ಜನರಿಗೆ ಸದಾ ಋಣಿಯಾಗಿರುವೆ. ಹಿಂದೆ ನಮ್ಮ ತಾತ ಸಾಕಷ್ಟು ಕೆಲಸ ಮಾಡಿದ್ದರು.ಈಗ ರಾಜ್ಯ ಸರ್ಕಾರ ಹಲವು ರೀತಿಯ ಸಾಧನೆ ಮಾಡಿದೆ.ಇದಕ್ಕೆಲ್ಲಾ ಜನರು ಕೈ ಹಿಡಿದಿದ್ದಾರೆ. ಪಕ್ಷದ ಎಲ್ಲ ನಾಯಕರ ವಿಶ್ವಾಸ ಪಡೆದು, ಸಹಕಾರದಿಂದ ಕೆಲಸ ಮಾಡುವೆ. ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ಬಡವರಿಗೆ ತಲುಪಿಸಲು ಆದ್ಯತೆ ನೀಡುವೆ. ನನ್ನ ಗೆಲುವಿಗಾಗಿ ನಾಯಕರು, ಮುಖಂಡರು, ಕಾರ್ಯಕರ್ತರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಆದರೆ ಈ ಗೆಲುವಿಗೂ ಕೆಟ್ಟ ಪರಿಣಾಮ ಬೀರಿರುವ ಪೆನ್ ಡ್ರೈವ್ ಪ್ರಕರಣಕ್ಕೂ ದಯವಿಟ್ಟು ಥಳುಕು ಹಾಕಬೇಡಿ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅದಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಶಕ್ತಿಮೀರಿ ಶ್ರಮಿಸುತ್ತೇನೆ ಎಂದು ತಿಳಿಸಿದರು.ಹಾನ