ಮಂಡ್ಯ: ಎಲ್ಲರ ಪ್ರೀತಿ ವಿಶ್ವಾಸ ನನ್ನ ಮೇಲೆ ಸದಾ ಇರಲಿ. ಕ್ಷೇತ್ರದ ಯಾವುದೇ ಗ್ರಾಮಕ್ಕೆ ಹೋದರೂ ಅದ್ದೂರಿಯಾಗಿ ಸ್ವಾಗತಿಸುವ ಜನರ ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಎಂದು ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ತಾಲೂಕಿನ ಹೊಳಲು ಗ್ರಾಮದಲ್ಲಿ ‘ದುದ್ದ ಹೋಬಳಿ ಮಾರಾಟಕ್ಕಿಲ್ಲ’ ಘೋಷಣೆಯಡಿ ಆಯೋಜಿಸಿದ್ದ ಪಾದಯಾತ್ರೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಈ ಬಾರಿ ರೈತ ಸಂಘದ ವತಿಯಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನಿಮ್ಮ ಮನೆಯ ಮಗನನ್ನು ಆಶೀರ್ವದಿಸಿ. ಕಾಂಗ್ರೆಸ್ ಪಕ್ಷ ನನ್ನನ್ನು ಬೆಂಬಲಿಸಿದ್ದು, ಇದು ನನಗೆ ಆನೆ ಬಲ ಬಂದಂತಾಗಿದೆ ಎಂದು ಹೇಳಿದರು.
ಮಾಜಿ ಶಾಸಕ ಎಚ್.ಬಿ.ರಾಮು ಮಾತನಾಡಿ, ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಆದೇಶದಂತೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಿದೆ. ಅವರನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಎನ್.ರವೀಂದ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಹೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಲ್.ಅಭಿನಂದನ್, ನಂದೀಶ್, ಚೇತನ್, ಚಂದನ್, ಜಟ್ಟಿಕುಮಾರ್, ಪಟೇಲ್ ರಾಮು, ಹರ್ಷ, ಸದಾನಂದ, ನಾರಾಯಣ್ ಇತರರಿದ್ದರು.