ಚಿಕ್ಕಮಗಳೂರಿನಲ್ಲಿ ನಡೆದ ರೈತ ಮತ್ತು ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಿ ಮಲೆನಾಡಿನ ಜನಜೀವನ ಉಳಿಸುವಂತೆ ಒತ್ತಾಯಿಸಿ ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರೈತ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಸಾವಿರಾರು ಜನ. 
ಜಿಲ್ಲೆ

ಜನರ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನದ ಭರವಸೆ

ಚಿಕ್ಕಮಗಳೂರು: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಜನರನ್ನು ತೊಂದರೆಯಿAದ ಮುಕ್ತಿಗೊಳಿಸಿ, ಜನಜೀವನ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆಗಬೇಕಾಗಿರುವ ಕೆಲಸಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ವಿವಿಧ ಪಕ್ಷಗಳ ಜನಪ್ರತಿನಿಧಿಗಳು ಜಿಲ್ಲೆಯ ಜನ ಹಾಗೂ ಬೆಳೆಗಾರರಿಗೆ ಭರವಸೆ ನೀಡಿದರು.

ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ, ಕರ್ನಾಟಕ ಬೆಳೆಗಾರರ ಒಕ್ಕೂಟ, ಶೃಂಗೇರಿ ಮಲೆನಾಡು ನಾಗರಿಕ ರೈತಹಿತ ರಕ್ಷಣಾ ಸಮಿತಿ, ಜಿಲ್ಲೆಯ ಎಲ್ಲ ರಾಜಕೀಯ ಪಕ್ಷಗಳು, ಸಂಘಸAಸ್ಥೆಗಳು ಕನ್ನಡ ಪರ ಸಂಘಟನೆಗಳು, ದಲಿತ, ರೈತ ಪರ ಸಂಘಟನೆಗಳ ಸಹಯೋಗದಲ್ಲಿ ರೈತ ಮತ್ತು ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಿ ಮಲೆನಾಡಿನ ಜನಜೀವನ ಉಳಿಸುವಂತೆ ಒತ್ತಾಯಿಸಿ ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರೈತ ಸಮಾವೇಶದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಜಿಲ್ಲೆಯ ಜನಜೀವನ ರಕ್ಷಣೆಗೆ ಅಭಯ ನೀಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜನರ ನಡುವೆ ಬಂದ ನಾವುಗಳು ರಾಜಕಾರಣವನ್ನು ಬದಿಗೊತ್ತಿ ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಆಗಬೇಕಾದ ಕೆಲಸವನ್ನು ಶಾಸಕರೊಂದಿಗೆ ಸೇರಿ ಮಾಡಿಸುತ್ತೇನೆ. ಜಿಲ್ಲೆಯ ಸಮಸ್ಯೆ ನಿವಾರಣೆಗೆ ಸಂಬAಧಿಸಿದ ಕೇಂದ್ರ ಸಚಿವರನ್ನು ಭೇಟಿಮಾಡಿಸುತ್ತೇನೆ. ಸಾಧ್ಯವಾದರೆ ನಿಯೋಗವನ್ನು ಕರೆದೊಯ್ಯುವುದಾಗಿ ತಿಳಿಸಿದರು.

ಶಾಸಕ ಎಚ್.ಡಿ.ತಮ್ಮುಯ್ಯ ಮಾತನಾಡಿ, ಜನರ ಜೀವನ, ಬದುಕಿನ ಹೋರಾಟ ಯಶಸ್ವಿಯಾಗಬೇಕು. ಈ ನಿಟ್ಟಿನಲ್ಲಿ ಬೇಡಿಕೆಗಳ ಗುರಿಯನ್ನು ಮುಟ್ಟಬೇಕು. ಬೇಡಿಕೆಗಳು ಬಹಳ ವರ್ಷಗಳಿಂದಲೂ ಇವೆ. ಇವುಗಳಿಗೆ ಪರಿಹಾರ ದೊರಕಿಸಿಲು ಹಲವಾರು ಸಂಘಟನೆಗಳು, ಜನಪ್ರತಿನಿಧಿಗಳು ಪ್ರಯತ್ನಿಸಿದ್ದಾರೆ. ಮೇಲ್ಮಟ್ಟದ ಅಧಿಕಾರಿಗಳ ಮನಸ್ಸಿನಲ್ಲಿ ಚಿಕ್ಕಮಗಳೂರು ಎಂದರೆ ಸಿರಿವಂತರ ಜಿಲ್ಲೆ ಎನ್ನುವ ಮನೋಭಾವವಿದೆ. ಆದರೆ ಜಿಲ್ಲೆಯಲ್ಲಿ ಶೇ. ೯೦ರಷ್ಟು ಸಮಸ್ಯೆಗಳು ಬಡವರದ್ದಾಗಿವೆ. ಸಮಸ್ಯೆ ನಿವಾರಣೆಗೆ ೨ ಬಾರಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ರಾಜ್ಯಮಟ್ಟದಲ್ಲಿ ಅರಣ್ಯ ಸಚಿವರು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಜನಸಾಮಾನ್ಯರ ಸಮಸ್ಯೆಯನ್ನು ಮನದಟ್ಟು ಮಾಡಿಕೊಟ್ಟಿz್ದೆÃವೆ ಎಂದರು.

ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳು ಡೀಮ್ಡ್ ಎಂಬ ಗುಮ್ಮವನ್ನು ರೈತರಿಗೆ ತೋರಿಸಿ ಹೆಸರಿಸುತ್ತಿದ್ದಾರೆ. ಈ ಹಿಂದೆ ನ್ಯಾಯಾಲಯದ ಆದೇಶ ಮುಂದಿಟ್ಟುಕೊAಡು ತೆರವು ಕಾರ್ಯಕ್ಕೆ ಮುಂದಾದಾಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ಮೂಲಕ ಅದನ್ನು ತಡೆಹಿಡಿಯಲಾಗಿತ್ತು. ಜಿಲ್ಲೆಯ ಜನಜೀವನ ಉಳಿಯುವಂತೆ ಸರ್ಕಾರಗಳನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಡೀಮ್ಡ್ ಅರಣ್ಯವಲ್ಲ. ಅದನ್ನು ಒಪ್ಪಲು ಸಾಧ್ಯವಿಲ್ಲ, ಅರಣ್ಯ ಸಂರಕ್ಷಣಾ ಕಾಯ್ದೆಯಲ್ಲಿ ಪರಿಭಾವಿತ ಅರಣ್ಯದ ಪ್ರಸ್ತಾಪವಿಲ್ಲ, ಇದು ಅಧಿಕಾರಿಗಳು ಸೃಷ್ಟಿಸಿದ ಪದವಾಗಿದೆ. ಒತ್ತುವರಿಗೆ ಸಂಬAಧಿಸಿದAತೆ ಈಗಾಗಲೇ ರೈತರಿಗೆ ನೀಡಿರುವ ನೋಟಿಸನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಾಪಸ್ ಪಡೆಯಬೇಕು. ನೋಟಿಸ್ ನೀಡುವ ಕುರಿತು ಜನಪ್ರತಿನಿಧಿಗಳೊಂದಿಗೆ ಮಾತನಾಡಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ, ಸರ್ವಾಧಿಕಾರವಲ್ಲ. ರೈತರ ಸಮಸ್ಯೆಯನ್ನು ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದರು.

ಶಾಸಕಿ ನಯಮ ಮೋಟಮ್ಮ ಮಾತನಾಡಿ, ಕ್ಷೇತ್ರದಲ್ಲಿ ಜನರ ಸಮಸ್ಯೆ ನಿವಾರಣೆಗೆ ಶಕ್ತಿಮೀರಿ ಶ್ರಮಿಸುತ್ತಿz್ದÉÃನೆ. ಬಡವರ ಕೆಲಸ ಮಾಡಿದರೆ ಒಂದು ವರ್ಗ ನಾವು ಮತಹಾಕಿಲ್ಲವೇ ಎನ್ನುತ್ತಾರೆ. ಇವರ ಪರವಾಗಿ ಕೆಲಸಮಾಡಿದರೆ ಬಡವರಾದ ನಾವು ಮತಹಾಕಿಲ್ಲವೇ? ನೀವು ಉಳ್ಳವರ ಪರವಾಗಿಯೇ ಕೆಲಸಮಾಡುತ್ತೀದ್ದೀರಿ. ಹೀಗೆ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಬುದ್ದಿ ಕಲಿಸುವುದಾಗಿ ಬೆದರಿಕೆ ಹಾಕುವ ಮೂಲಕ ಕೆಲವರು ತನ್ನ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಎಂದು ಹೇಳಿದರು.

ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ, ಶಾಸಕ ಜಿ.ಎಚ್.ಶ್ರೀನಿವಾಸ್, ನಾಗರಿಕ ಮತ್ತು ರೈತ ಹೋರಾಟ ಸಮಿತಿ ಅಧ್ಯಕ್ಷ ಎಸ್.ವಿಜಯಕುಮಾರ್, ಸಮಿತಿ ಮುಖಂಡರಾದ ಕೆ.ಕೆ.ರಘು, ಮೈಲಿಮನೆ ಪೂರ್ಣೇಶ್, ಬೆಳೆಗಾರ ಸಂಘಟನೆ ಮೂಡಿಗೆರೆ ತಾಲೂಕು ಅಧ್ಯಕ್ಷ ಬಾಲಕೃಷ್ಣ, ಪ್ರಮುಖರಾದ ಕೆರೆಮಕ್ಕಿ ಮಹೇಶ್, ಬೆನಕ ರವಿಕುಮಾರ್, ನಾಗೇಶ್, ರಂಜಿತ್, ಈಶ್ವರ್, ಎಚ್.ಎಚ್.ದೇವರಾಜ್, ಗಾಯತ್ರಿ ಶಾಂತೇಗೌಡ, ಟಿ.ರಾಜಶೇಖರ್, ಕೆ.ಜಿ.ಎಫ್. ಅಧ್ಯಕ್ಷ ಕಳಸೆ ಶಿವಣ್ಣ, ಮಾಜಿ ಅಧ್ಯಕ್ಷ ಬಿ.ಸಿ.ಜಯರಾಮ್ ಮತ್ತಿತರರಿದ್ದರು.

ಬೃಹತ್ ಮೆರವಣಿಗೆ

ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ರೈತರ ಬೃಹತ್ ಸಮಾವೇಶಕ್ಕೂ ಮುನ್ನ ನಗರದ ತಾಲೂಕು ಕಚೇರಿಯಿಂದ ಸಾವಿರಾರು ರೈತರು ಆಜಾದ್ ಪಾರ್ಕ್ ವೃತ್ತದವರೆಗೆ ಭಾರಿ ಮೆರವಣಿಗೆ ನಡೆಸಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವು ದಶಕಗಳಿಂದ ಅರಣ್ಯ ಹಾಗೂ ಜನರ ನಡುವಿನ ಸಂಘರ್ಷ ಮುಂದುವರಿದೇ ಇರುವ ಹಿನ್ನೆಲೆಯಲ್ಲಿ ನಾಗರೀಕ ಮತ್ತು ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದ್ದ ರೈತ ಮತ್ತು ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಿ ಮಲೆನಾಡಿನ ಜನಜೀವನ ಉಳಿಸುವಂತೆ ಒತ್ತಾಯಿಸಿ ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರೈತ ಸಮಾವೇಶದಲ್ಲಿ ನಿರೀಕ್ಷೆಗೂ ಮೀರಿ ರೈತರು ಭಾಗವಹಿಸಿದ್ದರು.

ಯಾವುದೇ ಪಕ್ಷ ಬೇಧವಿಲ್ಲದೆ ವಿವಿಧ ಪಕ್ಷಗಳ ನಾಯಕರೂ ಸಮಾವೇಶದಲ್ಲಿ ಭಾಗಿಯಾಗುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜೊತೆ ಈ ಬಗ್ಗೆ ಸಮಾಲೋಚನೆ ನಡೆಸುವ ಮೂಲಕ ಸಮಸ್ಯೆ ಶಾಶ್ವತವಾಗಿ ಪರಿಹರಿಸುವ ಭರವಸೆ ನೀಡಿದ್ದು ವಿಶೇಷವಾಗಿತ್ತು.