ಜಿಲ್ಲೆ

ಜನರ ಸಮಸ್ಯೆಗಳಿಗೆ ಸ್ಪಂದಿಸಿ

ಹನೂರು: ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಮೂಲಕ ಪಟ್ಟಣದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪಟ್ಟಣ ಪಂಚಾಯಿತಿಗೆ ಆಯ್ಕೆಯಾದ ನಾಮನಿರ್ದೇಶಿತ ಸದಸ್ಯರಾದ ಬಸವರಾಜು ಹಾಗೂ ನವೀನ್ ಅವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಹನೂರು ತಾಲೂಕು ಕೇಂದ್ರವಾಗಿದ್ದು, ಇಲ್ಲಿನ ಪಪಂ ವ್ಯಾಪ್ತಿಯಲ್ಲಿ 13 ವಾರ್ಡ್‌ಗಳಿವೆ. ಆದರೆ ಕೆಲವು ಸಮಸ್ಯೆಗಳಿವೆ. ಈ ಬಗ್ಗೆ ಗಮನಹರಿಸಿ ಜನರ ಕಷ್ಟಗಳಿಗೆ ಧ್ವನಿಯಾಗಬೇಕು. ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕು. ಈ ಮೂಲಕ ಮಾದರಿ ಪಂಚಾಯಿತಿಯಾಗಿಸಲು ಶ್ರಮಿಸಬೇಕು ಎಂದು ತಿಳಿಸಿದರು.

ನಾಮ ನಿರ್ದೇಶಿತ ಸದಸ್ಯ ಬಸವರಾಜು ಮಾತನಾಡಿ, ನಗರದ ಅಭಿವೃದ್ಧಿಗೆ ಪಪಂನೊಂದಿಗೆ ಕೈ ಜೋಡಿಸಲಾಗುವುದು. ಪಕ್ಷವನ್ನು ಸಂಘಟಿಸುವುದರ ಜತೆಗೆ ಮುಂದಿನ ಪಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು ಎಂದರು. ಪಪಂ ಸದಸ್ಯರಾದ ಗಿರೀಶ್, ಸುದೇಶ್, ಸೋಮಶೇಖರ್, ನಾಮ ನಿರ್ದೇಶಿತ ಸದಸ್ಯ ನವೀನ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರದೀಪ್‌ನಾಯ್ಡು, ಮುಖಂಡರಾದ ನಾಗರಾಜು, ಲೊಕ್ಕನಹಳ್ಳಿ ಜಗದೀಶ, ರಮೇಶ್‌ನಾಯ್ಡು, ಪಾಡುರಂಗ ನಾಯ್ಡು, ರವೀಂದ್ರ ಇತರರು ಇದ್ದರು.