ಮೂಡಲಗಿ: ತಾಲೂಕಿನ ಜನರ ಹೃದಯ ಸೌಹಾರ್ದತೆ ಮೆಚ್ಚುವಂತಹದ್ದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್ ಹೇಳಿದರು.
ಪಟ್ಟಣದ ಮಡ್ಡಿ ವೀರಭದ್ರೇಶ್ವರ ಜಾತ್ರಾ ರಥೋತ್ಸವದ ನಿಮಿತ್ತ ಮಂಗಳವಾರ ಹಮ್ಮಿಕೊಂಡಿದ್ದ ಸತ್ಸಂಗ ಸಮ್ಮೇಳನದಲ್ಲಿ ಮಾತನಾಡಿದರು. ಭಾರತ ಅತ್ಯಂತ ಶ್ರೀಮಂತ ಇತಿಹಾಸ ಹೊಂದಿದ ದೇಶವಾಗಿದ್ದು, ಹಳ್ಳಿ ಹಳ್ಳಿಗಳಲ್ಲಿ ನಮ್ಮ ಸಂಸತಿ ಕಣ್ಣಿಗೆ ರಾಚುತ್ತದೆ ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಜನರಿಗೋಸ್ಕರ ಮುಂದುವರಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎಂದರು. ಸೆ.3ರಂದು ವೀರಭದ್ರೇಶ್ವರ ಜಯಂತಿಯನ್ನು ಎಲ್ಲರೂ ಆಚರಣೆ ಮಾಡಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳ್ಕರ್ ಮಾತನಾಡಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುಧೋಳದ ಸಿದ್ದರಾಮ ಶಿವಯೋಗಿ ಸ್ವಾಮೀಜಿ, ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಮಹಾಂತೇಶ ಕಡಾಡಿ, ದೇವಸ್ಥಾನದ ಅಧ್ಯ ಭೀಮಪ್ಪ ಹಂದಿಗುಂದ, ಭೀಮಪ್ಪ ಗಡಾದ, ಬಿ.ಬಿ.ಬೆಳಕೊಡ, ಲಗಮಣ್ಣ ಕಳಸಣ್ಣವರ, ರಾವಸಾವ ಬೆಳಕೊಡ, ನಿಂಗಪ್ಪ ಪಿರೋಜಿ, ಎಂ.ಜಿ.ಗಾಣಿಗೇರ ಹಾಗೂ ದೇವಸ್ಥಾನ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.