ಜಿಲ್ಲೆ

ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧಾರವಾಡಕ್ಕೆ

ವಿಜಯವಾಣಿ ಸುದ್ದಿಜಾಲ ಧಾರವಾಡ
ಧಾರವಾಡ ಐಐಟಿ ನೂತನ ಕಟ್ಟಡವನ್ನು 2023ರ ಜ. 1ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲು ಅಗತ್ಯ ಸಿದ್ಧತೆ ಮಾಡಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ತಾಲೂಕಿನ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಧಾರವಾಡ ಐಐಟಿ ನೂತನ ಕಟ್ಟಡದ ಕಾಮಗಾರಿಯನ್ನು ಶನಿವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪ್ರಧಾನಮಂತ್ರಿ ಮೋದಿ ಅವರನ್ನು ಉದ್ಘಾಟನೆಗೆ ಆಹ್ವಾನಿಸುವ ಕುರಿತು ಈಗಾಗಲೇ ಚರ್ಚಿಸಲಾಗಿದ್ದು, ಅವರು ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ವಾರ ಇನ್ನೊಮ್ಮೆ ಕಟ್ಟಡದ ಕಾಮಗಾರಿ ನೋಡಿಕೊಂಡು ಉದ್ಘಾಟನೆ ದಿನಾಂಕ ಅಂತಿಮಗೊಳಿಸಲಾಗುವುದು. ಜನವರಿಯಲ್ಲಿ ಪ್ರಧಾನಿ 2- 3 ಬಾರಿ ವಿವಿಧ ಕಾರ್ಯಕ್ರಮಗಳಿಗಾಗಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದರು.
ಶಾಸಕ ಅಮೃತ ದೇಸಾಯಿ, ಜಿಕ್ಲಾಧಿಕಾರಿ ಗುರುದತ್ತ ಹೆಗಡೆ, ಧಾರವಾಡ ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಐಐಟಿ ಪ್ರಾಧ್ಯಾಪಕರು, ಕಟ್ಟಡ ಗುತ್ತಿಗೆದಾರರು ಉಪಸ್ಥಿತರಿದ್ದರು.