ಜಿಲ್ಲೆ

ಜನಸಂಖ್ಯೆಗೆ ಅನುಗುಣವಾಗಿ ನಿಗಮಗಳಿಗೆ ಅನುದಾನ ಬಿಡುಗಡೆ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಸರ್ವ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆ,ಕಾಯಕಕ್ಕೆ ಕಾಯಕಲ್ಪ,ಕುಲ ವೃತ್ತಿ ಅವಲಂಬಿಸಿದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ಕುರಿತಂತೆ ಮಠಾಧೀಶರ ನಿ ಯೋಗ ಸಿಎಂ ಸಿದ್ಧರಾಮಯ್ಯ ಅವರನ್ನು ಮಂಗಳವಾರ ಬೆಂಗಳೂರಲ್ಲಿ ಭೇಟಿ ಮಾಡಿ ಚರ್ಚಿಸಿತು.
ಸಾಮಾಜಿಕ ನ್ಯಾಯದಡಿ ವಿವಿಧಗಳ ಸಿಂಡಿಕೆಟ್‌ಗಳಿಗೆ ಸದಸ್ಯರ ನೇಮಕ. ಜಯಂತಿಗಳ ಆಚರಣೆ ಪೂರ್ವದಲ್ಲಿ ಪ್ರಬುದ್ಧ ಚಿಂತನೆ ನೀ ಡಲು ಉಪನ್ಯಾಸಕರಿಗೆ ಕಾರ‌್ಯಾಗಾರ. ವಿಧಾನಪರಿಷತ್ ಸದಸ್ಯರ ಆಯ್ಕೆಯಲ್ಲಿ ರಾಜಕೀಯ ಪ್ರಾತಿನಿಧ್ಯ ವಂಚಿತ ಚಿಕ್ಕಪುಟ್ಟ ಸಮುದಾಯ ಗಳಿಗೆ ಆದ್ಯತೆ ಮತ್ತಿತರ ವಿಚಾರಗಳನ್ನು ನಿಯೋಗ ಸಮಾಲೋಚನೆ ನಡೆಸಿತು.
ಶ್ರೀ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಸ್ವಾಮಿಜಿ,ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಜಿ,ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ,ಹರಿ ಹರ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ,ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ,ಮಡಿವಾಳ ಗು ರುಪೀಠದ ಶ್ರೀಬಸವ ಮಾಚಿದೇವ ಸ್ವಾಮೀಜಿ,ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತೀ ಹಡಪದ ಅಪ್ಪಣ್ಣ ಸ್ವಾಮೀಜಿ,ಶ್ರೀ ನಾ ರಾಯಣ ಮಹಾ ಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮಿಜಿ,ಕುಂಬಾರ ಗುರುಪೀಠದ ಶ್ರೀ ಕುಂಬಾರ ಗುಂಡಯ್ಯ ಸ್ವಾಮೀಜಿ ಇ ದ್ದರು.