ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆ ಗ್ರಾಪಂ ಆವರಣದಲ್ಲಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯನ್ನು ಶಾಸಕ ಎಚ್.ಡಿ.ತಮ್ಮಯ್ಯ ಉದ್ಘಾಟಿಸಿದರು. ಬಿ.ಎಚ್.ಹರೀಶ್, ಸುಮಂತ್, ಎಂ.ಕೆ.ರೇಣುಕಾ, ಪುಷ್ಪಾ, ಎಚ್.ಎನ್.ಶಿವಕುಮಾರ್ ಮತ್ತಿತರರಿದ್ದರು. 
ಜಿಲ್ಲೆ

ಜನಸಂಪರ್ಕ ಸಭೆಗಳು ಜನರ ಸಮಸ್ಯೆ ಪರಿಹರಿಸುವ ಸಭೆಗಳಾಗಬೇಕು

ಚಿಕ್ಕಮಗಳೂರು: ವಿವಿಧ ಮಟ್ಟದಲ್ಲಿ ನಡೆಯುವ ಜನಸಂಪರ್ಕ ಸಭೆಗಳು ಜನರ ಮೂಲಭೂತ ಸಾಮಾನ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಭೆಗಳಾಗಬೇಕು ಎಂದು ಶಾಸಕ ಎಚ್.ಡಿ ತಮ್ಮಯ್ಯ ತಿಳಿಸಿದರು.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹಿರೇಕೊಳಲೆ ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಲಾಗಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಿಂದ ತಾಲೂಕು, ಜಿಲ್ಲಾ ಕೇಂದ್ರಕ್ಕೆ ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ಬರದಂತೆ ತಡೆಯುವ ಉz್ದೆÃಶದಿಂದ ತಾಲೂಕು ಅಧಿಕಾರಿಗಳ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆಯ ಬಾಗಿಲಿಗೆ ತರುವ ಉz್ದÉÃಶದಿಂದ ಜನಸಂಪರ್ಕ ಸಭೆಯನ್ನು ನಡೆಸಿ ಇತ್ಯರ್ಥಪಡಿಸಲು ತೀರ್ಮಾನಿಸಲಾಗಿದೆ ಎಂದರು.

ನಾಗರೀಕರ ಮೂಲಭೂತ ಸಮಸ್ಯೆಗಳಾದ ಮನೆ, ನಿವೇಶನ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಸಿಗದಿರುವವರು, ವೃದ್ಧಾಪ್ಯ ವೇತನ ಸೇರಿದಂತೆ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತನ್ನಿ ಎಂದು ಹೇಳಿದ ಅವರು, ನಿಜವಾದ ಬಡವರು ಹೊಂದಿರುವ ಬಿಪಿಎಲ್ ಕಾರ್ಡನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿರೇಕೊಳಲೆ ಗ್ರಾಪಂ ವ್ಯಾಪ್ತಿಯ ಹಿರೇಕೊಳಲೆಗೆ ೨೦ ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಹೊಸಪುರ ರಸ್ತೆಗೆ ೫೦ ಲಕ್ಷ ರೂ, ಕಾಲೋನಿಗೆ ೨೦ ಲಕ್ಷ ರೂ, ನರಗನಹಳ್ಳಿ ಸಮುದಾಯ ಭವನಕ್ಕೆ ೫ ಲಕ್ಷ ರೂ, ಹಿರೇಕೊಳಲೆ ಸಾರ್ವಜನಿಕ ಸಮುದಾಯ ಭವನಕ್ಕೆ ೫ ಲಕ್ಷ ರೂ, ಚಿಕ್ಕೊಳಲೆ-ಕಾರೇಮನೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ೫ ಲಕ್ಷ ರೂ ಒಟ್ಟು ೯೦ ಲಕ್ಷ ರೂ ಅನುದಾನವನ್ನು ಈ ಪಂಚಾಯಿತಿಗೆ ಮೀಸಲಿಟ್ಟು ಕಾಮಗಾರಿ ಪ್ರಾರಂಭಿಸಿz್ದÉÃವೆ ಎಂದರು.

ಇದೇ ಪಂಚಾಯಿತಿ ವ್ಯಾಪ್ತಿಯ ಹೊಸಪುರ-ವಡೆಯರಪುರ ಈ ಎರಡು ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದ್ದು, ಹೊಸಪುರ ಗ್ರಾಮದ ೧೦ ಫಲಾನುಭವಿಗಳಿಗೆ ನಿವೇಶನ, ಹಕ್ಕುಪತ್ರ ನೀಡಲಾಗಿದೆ ಎಂದು ತಿಳಿಸಿದ ಅವರು, ಕ್ಷೇತ್ರದ ಪ್ರತೀ ಗ್ರಾ.ಪಂ ವ್ಯಾಪ್ತಿಯಲ್ಲಿ ೨ ರಿಂದ ೪ ಎಕರೆ ಜಾಗವನ್ನು ಗುರ್ತಿಸಿ ಬಡವರು, ನಿರಾಶ್ರಿತರಿಗೆ, ನಿವೇಶನ ರಹಿತರಿಗೆ ಉಚಿತವಾಗಿ ನಿವೇಶನ ನೀಡುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕ್ಷೇತ್ರದ ೩೪ ಗ್ರಾಪಂ ಗಳಲ್ಲಿ ಇದೇ ಆದೇಶವನ್ನು ಹೊರಡಿಸಲಾಗಿದ್ದು, ಸಧ್ಯದಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ ಜನಸಂಪರ್ಕ ಸಭೆಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಸೂಕ್ತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಎಪಿಎಂಸಿ ಸಂಸ್ಕರಣಾ ಘಟಕದ ಅಧ್ಯಕ್ಷ ಬಿ.ಎಚ್. ಹರೀಶ್ ಮಾತನಾಡಿ, ಜನಪರವಾಗಿ ಕೆಲಸ ಮಾಡಬೇಕೆಂಬ ಉz್ದÉÃಶದಿಂದ ಸರ್ಕಾರ ಜನಸಂಪರ್ಕ ಸಭೆಗಳನ್ನು ಆಯೋಜನೆ ಮಾಡಲಾಗಿದ್ದು, ಸರ್ಕಾರದ ಸೌಲಭ್ಯಗಳು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಹಿರೇಕೊಳಲೆ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ತಮ್ಮ ಮೂಲಭೂತ ಸಮಸ್ಯೆಗಳನ್ನು ಜನಸಂಪರ್ಕ ಸಭೆಯಲ್ಲಿ ಹಾಜರಿರುವ ಸಂಬAಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಿ ಎಂದು ಮನವಿ ಮಾಡಿದರು.

ಜನಸಂಪರ್ಕ ಸಭೆಯನ್ನು ಉದ್ಘಾಟಿಸಿದ ಹಿರೇಕೊಳಲೆ ಗ್ರಾ.ಪಂ ಅಧ್ಯಕ್ಷೆ ಕವಿತಾ ಸುನಿಲ್‌ಕುಮಾರ್ ಮಾತನಾಡಿ, ಮನೆ, ಹಕ್ಕುಪತ್ರ, ನಿವೇಶನ ಸೇರಿದಂತೆ ಜನರ ಯಾವುದೇ ಸಮಸ್ಯೆಗಳಿದ್ದರೂ ಈ ಸಭೆಯಲ್ಲಿ ಶಾಸಕರು, ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಪರಿಹರಿಸಿಕೊಳ್ಳಿ ಎಂದು ವಿನಂತಿಸಿದರು.

ತಹಸೀಲ್ದಾರ್ ಸುಮಂತ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಲು ಸರ್ಕಾರದ ಆದೇಶದನ್ವಯ ಜನಸಂಪರ್ಕ ಸಭೆಯನ್ನು ಆಯೋಜನೆ ಮಾಡಲಾಗಿದೆ. ತಾಲ್ಲೂಕಿನ ಎಲ್ಲಾ ಇಲಾಖಾಧಿಕಾರಿಗಳು ಶಾಸಕರ ಅಧ್ಯಕ್ಷತೆಯಲ್ಲಿ ಭಾಗವಹಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಹೊಸಪುರ, ವಡೆಯರಪುರ ಈ ಎರಡು ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಆಯ್ಕೆ ಮಾಡಿ ಹೊಸಪುರದ ೧೬ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ನೀಡಲಾಗಿದ್ದು, ವಡೆಯರಪುರದ ಫಲಾನುಭವಿಗಳಿಗೆ ಮುಂದೆ ನಿವೇಶನ ಹಕ್ಕುಪತ್ರ ನೀಡಲು ಕ್ರಮವಹಿಸಲಾಗುವುದೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಕೆ. ರೇಣುಕ, ಪುಷ್ಪ, ಪೂರ್ಣೇಶ್, ಎಚ್.ಎನ್. ಶಿವಕುಮಾರ್, ಸಿ.ಪಿ.ವಿನಯ್, ಜಿ.ಎಸ್.ಪೂರ್ಣಿಮ, ಎನ್.ಇ. ಸಂದೀಪ್, ಪ್ರಕಾಶ್, ವಿಶಾಲಾಕ್ಷಿ ಮತ್ತಿತರರಿದ್ದರು.