ಗುಂಡ್ಲುಪೇಟೆ: ದಾರಿತಪ್ಪಿ ಗ್ರಾಮದ ಜಮೀನಿಗೆ ಬಂದಿದ್ದ ಕರಡಿಯನ್ನು ಅರಣ್ಯ ಇಲಾಖೆ ಸುರಕ್ಷಿತವಾಗಿ ಸೆರೆಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಬುಧವಾರ ಅಣ್ಣೂರು ಕೇರಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡ ಕರಡಿಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಸೆರೆಹಿಡಿದಿದೆ. ಅರಣ್ಯ ಇಲಾಖೆಯ ಪಶುವೈದ್ಯ ಡಾ.ಮಿರ್ಜಾ ವಾಸಿಂ 6 ವರ್ಷದ ಕರಡಿಯ ಆರೋಗ್ಯ ತಪಾಸಣೆ ನಡೆಸಿದ ನಂತರ ಬಂಡೀಪುರ ಅರಣ್ಯಕ್ಕೆ ಬಿಡಲಾಯಿತು ಎಂದು ಗುಂಡ್ಲುಪೇಟೆ ಉಪವಿಭಾಗದ ಎಸಿಎಫ್ ರವೀಂದ್ರ ತಿಳಿಸಿದ್ದಾರೆ.