ಜಿಲ್ಲೆ

ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

ಬಳ್ಳಾರಿ : ಜಿಲ್ಲಾಡಳಿತದಿಂದ ವಿಶ್ವ ಕರ್ಮ ಜಯಂತಿಯನ್ನು ಸೆ. 17 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಎಡಿಸಿ ಮಹಮ್ಮದ್ ಎನ್. ಝುಬೇರ್ ಹೇಳಿದರು.
ನಗರದ ಎಡಿಸಿ ಕಚೇರಿ ಸಭಾಂಗಣದಲ್ಲಿ ವಿಶ್ವ ಕರ್ಮ ಜಯಂತಿ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಇಲ್ಲಿನ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ನಗರದ ಕಾಳಿಕಾ ಕಮ್ಮಟೇಶ್ವರ ದೇವಸ್ಥಾನದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವರೆಗೆ ಮೆರವಣಿಗೆ ನಡೆಯಲಿದ್ದು, ಸಾಂಸ್ಕ್ರತಿಕ ಕಲಾತಂಡಗಳು ಪಾಲ್ಗೂಳ್ಳಲಿವೆ. ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ, ಲಘು ಉಪಹಾರ, ಸ್ವಚ್ಛತೆ ಸೇರಿದಂತೆ ಇತರೆ ವ್ಯವಸ್ಥೆ ಕೈಗೊಳ್ಳಬೇಕು. ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು. ವಿಶ್ವಕರ್ಮ ಅವರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು ಎಂದರು. ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಎಲ್ಲಾ ಅಧಿಕಾರಿಗಳು ಭಾಗವಹಿಸಿ ಯಶ್ವಸಿಗೊಳಿಸಬೇಕು ಎಂದರು.