ಜಿಲ್ಲೆ

ಜಯನಗರ ಶಿವಮಂದಿರದಲ್ಲಿ ಆ.17 ರಿಂದ ಶಿವ ಧರ್ಮ ಆಧ್ಯಾತ್ಮಿಕ ಪ್ರವಚನ ಪ್ರಾರಂಭ

ಕಲಬುರಗಿ:ಪ್ರತಿ ವರ್ಷದಂತೆ ಜಯನಗರ ಶಿವಮಂದಿರದಲ್ಲಿ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ನಿಮಿತ್ತ ಆ.17 ರಿಂದ ಸೆ.16 ರವರೆಗೆ ಒಂದು ತಿಂಗಳ ಶಿವ ಧರ್ಮ ವಿಶೇಷ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು ನಿತ್ಯ ಸಂಜೆ 7 ರಿಂದ 8 ಗಂಟೆವರೆಗೆ ಪ್ರವಚನಕಾರ ಶ್ರೀ ಶಿವಶಂಕರ ಬಿರಾದಾರ ಪ್ರವಚನ ನಡೆಸಿಕೊಡಲಿದ್ದಾರೆ.ನಂತರ ರಾತ್ರಿ 8 ರಿಂದ 8.30 ಗಂಟೆವರೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.ಇದರಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು,ಚಿಂತಕರು ಮತ್ತು ಸಾಹಿತಿಗಳು, ಪತ್ರಕರ್ತರು ಭಾಗವಹಿಸುವರು.ಕಳೆದ ವರ್ಷ ಶ್ರಾವಣ ಮಾಸದ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.ಅನೇಕರಿಂದ ವಿವಿಧ ರೀತಿಯ ಉಪನ್ಯಾಸಗಳು ನಡೆದು ಜನರು ಮೆಚ್ಚುಗೆ ವ್ಯಕ್ತಪಡಿಸಿದರು.ಅದೇ ರೀತಿ ಈ ವರ್ಷವೂ ಉಪನ್ಯಾಸಗಳು ನಡೆಯಲಿವೆ ಅದರ ಜೊತೆಗೆ ಮಕ್ಕಳಿಗಾಗಿ ರಂಗೋಲಿ, ಚಿತ್ರ ಬಿಡಿಸುವುದು ಸೇರಿದಂತೆ ಅನೇಕ ಸ್ಪರ್ಧೆಗಳು ಎರ್ಪಡಿಸಿ ಬಹುಮಾನ ವಿತರಣೆ ಮಾಡಲಾಗುವುದು ಎಂದರು.

ಆ.17 ರಂದು ಸಂಜೆ 7 ಗಂಟೆಗೆ ಪ್ರವಚನ ಕಾರ್ಯಕ್ರಮವನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಉದ್ಘಾಟನೆ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಟ್ರಸ್ಟ್ ಗೌರವಾಧ್ಯಕ್ಷ,ಎಚ್ಕೆಇ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ಮಹಾನಗರ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ, ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ, ಸಾಹಿತಿ ಡಾ.ಚಿ.ಸಿ.ನಿಂಗಣ್ಣ ಆಗಮಿಸಲಿದ್ದಾರೆ.ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅಧ್ಯಕ್ಷತೆ ವಹಿಸುವರು.ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿರುವರು.ತಿಂಗಳ ಪರ್ಯಂತ ನಡೆಯುವ ಪ್ರವಚನ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕದ ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ.ಪ್ರವಚನದ ನಂತರ ನಿತ್ಯ ಪ್ರಸಾದ ವ್ಯವಸ್ಥೆ ಇರುತ್ತದೆ.ಭಕ್ತರು, ಸಾರ್ವಜನಿಕರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಬೇಕು ಎಂದು ಅವರು ಕೋರಿದ್ದಾರೆ.