ಅರಕಲಗೂಡು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಕುಡಿಯುವ ನೀರು ಕಾಮಗಾರಿಗೆ ಶಾಸಕ ಎ.ಮಂಜು ಭಾನುವಾರ ಭೂಮಿಪೂಜೆ ನೆರವೇರಿಸಿದರು.
ಸಂತೆಮರೂರು, ಯಲಗತವಳ್ಳಿ, ಗಂಜಲಗೂಡು, ಹೊನ್ನವಳ್ಳಿ, ವಿಜಾಪುರ ಕಾಲನಿ ಹಾಗೂ ಕತ್ತಿಮಲ್ಲೇನಹಳ್ಳಿ ಗ್ರಾಮದಲ್ಲಿ ಮನೆ, ಮನೆಗೆ ಕುಡಿಯುವ ನೀರು ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಯಿತು.
ಶಾಸಕ ಎ.ಮಂಜು ಮಾತನಾಡಿ, ತಾಲೂಕಿನಲ್ಲಿ 680 ಕೋಟಿ ರೂ. ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಸಲು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪ್ರತಿ ಗ್ರಾಮದಲ್ಲಿ ಓವರ್‌ಹೆಡ್ ಟ್ಯಾಂಕ್ ನಿರ್ಮಿಸಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. ದಿನಕ್ಕೆ ಒಬ್ಬರಿಗೆ ತಲಾ 55 ಲೀಟರ್ ನೀರು ನೀಡಲಾಗುವುದು. ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲು ಪೈಪ್‌ಲೈನ್ ಅಳವಡಿಸಿ, ನದಿ ಮೂಲಗಳಿಂದ ನೀರು ಒದಗಿಸಲಾಗುವುದು ಎಂದರು.