ಜಿಲ್ಲೆ

ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಶ್ರೀದೇವಿ ಭಾಜನ

ಜಗಳೂರು: ಪಟ್ಟಣದ ನಿವಾಸಿ, ತಾಲೂಕಿನ ಭರಮಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜೆ ಶ್ರೀದೇವಿ ಅವರು ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
2002 ರಿಂದ ವೃತ್ತಿ ಜೀವನ ಪ್ರಾರಂಭಿಸಿದ ಇವರು, ಚಿಕ್ಕ ಉಜ್ಜಿಯಿನಿ ಸ.ಹಿ.ಪ್ರಾ.ಶಾಲೆಯಲ್ಲಿ ಮೂರೂವರೆ ವರ್ಷ ಸೇವೆ, ಕಳೆದ 17 ವರ್ಷಗಳಿಂದಲೂ ಭರಮಸಮುದ್ರ ಸ.ಹಿ.ಪ್ರಾ.ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇಲಾಖೆಯಲ್ಲಿ ನೀಡುವ ವಿವಿಧ ತರಬೇತಿಗಳಲ್ಲಿ ತಾಲೂಕು ಮತ್ತು ಕ್ಲಸ್ಟರ್ ಹಂತದ ಸಂಪನ್ಮೂಲ ವ್ಯಕ್ತಿಯಾಗಿ ಗುರುತರ ಸೇವೆ ಸಲ್ಲಿಸಿದ ಕೀರ್ತಿ ಇವರಿಗಿದೆ. ಮಕ್ಕಳ ಕಲಿಕಾ ಪ್ರಗತಿಯ ಮೌಲ್ಯಮಾಪನಕ್ಕಾಗಿಯೇ ಯೂ ಟ್ಯೂಬ್ ಚಾನೆಲ್ ಆರಂಭಿಸಿದ್ದು, ಆ ಮೂಲಕ ಮಕ್ಕಳ ಕಲಿಕೆಯನ್ನು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ.