ಜಿಲ್ಲೆ

ಜಾಗತಿಕ ಲಿಂಗಾಯತ ಜಿಲ್ಲಾ ಘಟಕ 29ಕ್ಕೆ ಚಾಲನೆ

ಚಿತ್ರದುರ್ಗ: ಜಾಗತಿಕ ಲಿಂಗಾಯತ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಜು.29ರ ಬೆಳಗ್ಗೆ 10.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಪ್ರಧಾನ ಸಂಚಾಲಕ ಜಿ.ಡಿ.ಕೆಂಚವೀರಪ್ಪ ಹಾಗೂ ಮಹಿಳಾ ಘಟಕದ ಅಧ್ಯಕ್ಷ ಶೈಲಜಾ ಆರ್.ಬಾಬು ತಿಳಿಸಿದ್ದಾರೆ.
ಸಾಣೇಹಳ್ಳಿ ಮಠದ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮುರುಘಾ ಮಠದ ಡಾ. ಶ್ರೀ ಜಯಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ‌್ಯದರ್ಶಿ ಡಾ.ಶಿವಾನಂದ ಜಾಮದಾರ್ ಕಾರ‌್ಯಕ್ರಮ ಉದ್ಘಾಟಿಸಲಿದ್ದು, ನಿವೃತ್ತ ಪ್ರಾಧ್ಯಾಪಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಚಿತ್ರದುರ್ಗ ಬಸವಮಂಟಪದ ಮಾತಾದಾನೇಶ್ವರಿ ತಾಯಿ ಸೇರಿ ನಾನಾ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.