ಹರಪನಹಳ್ಳಿ: ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಶನಿವಾರ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.
ಮಂಡಲ ಅಧ್ಯಕ್ಷ ಕೆ.ಲಕ್ಷ್ಮಣ್ ಮಾತನಾಡಿ, 1999ರ ಮೇ 3 ರಿಂದ ಜು.26ರ ವರೆಗೆ ಪಾಕಿಸ್ತಾನ ವಿರುದ್ಧ ಕಾರ್ಗಿಲ್ ಯುದ್ಧ ನಡೆದಿದ್ದು, ಭಾರತ ಜಯ ಗಳಿಸಿದ ಹಿನ್ನೆಲೆಯಲ್ಲಿ ಸೈನಿಕರ ಶೌರ್ಯ, ತ್ಯಾಗ, ಬಲಿದಾನ ಸ್ಮರಿಸಲು ಕಾರ್ಗಿಲ್ ದಿವಸ ಆಚರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ, ದೇಶದ ರಕ್ಷಣಾ ವ್ಯವಸ್ಥೆ ಮತ್ತು ಸೈನಿಕರ ಮೂಲ ಸೌಕರ್ಯದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿದ್ದಾರೆ. ಹಾಗಾಗಿ ವಿಶ್ವದಲ್ಲಿ ಭಾರತಕ್ಕೆ ವಿಶೇಷ ಮನ್ನಣೆ ದೊರೆಯುತ್ತಿದೆ ಎಂದು ತಿಳಿಸಿದರು.