ಕೋಲಾರ ತಾಲೂಕು ಸೂಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಬಹುಮಾನ ವಿತರಿಸಿದರು. ನರಸಾಪುರ ಕೆಪಿಎಸ್ ಶಾಲೆ ಮುಖ್ಯಶಿಕ್ಷಕ ಗೋಪಿನಾಥ್, ಶಿಕ್ಷಕ ಎಂ.ಆರ್.ಗೋಪಾಲಕೃಷ್ಣ ಇದ್ದರು.  
ಜಿಲ್ಲೆ

ಜಾಗೃತಿಯಿಂದ ರೋಗ ಮುಕ್ತ ಪರಿಸರ

ಕೋಲಾರ : ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಅರಿವು ಹೆಚ್ಚಿಸಬೇಕು. ಸ್ವಚ್ಛತೆಗೆ ಧಕ್ಕೆಯಾದರೆ ಸೊಳ್ಳೆಗಳ ಹಾವಳಿ ಎಷ್ಟರಮಟ್ಟಿಗೆ ಹೆಚ್ಚುತ್ತದೆ ಮತ್ತು ಆ ಸೊಳ್ಳೆಗಳಿಂದ ಹರಡುವ ಮಾರಕ ಸಾಂಕ್ರಾಮಿಕ ರೋಗಗಳಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ನೀಡುವುದೇ ಪ್ರಬಂಧ ಸ್ಪರ್ಧೆಯ ಉದ್ದೇಶ ಎಂದು ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ತಿಳಿಸಿದರು.
ತಾಲೂಕು ಸೂಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ಪಚ್ಛತೆ, ಸಾರ್ವತ್ರಿಕಾ ಲಸಿಕಾ ಅಭಿಯಾನ, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಸಾಂಕ್ರಾಂಮಿಕ ರೋಗಗಳ ಕುರಿತು ಮಂಗಳವಾರ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನ ವಿತರಿಸಿ ಮಾತನಾಡಿ, ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗಳಿಂದ ಮುಕ್ತವಾಗುವ ಮೂಲಕ ಆರೋಗ್ಯ ಭಾರತ ನಿರ್ಮಾಣದ ಉದ್ದೇಶ ಸಫಲಗೊಳ್ಳಲು ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಸಾಂಕ್ರಾಂಮಿಕ ರೋಗ ತಡೆ ಹಾಗೂ ಲಸಿಕಾ ಕಾರ್ಯಕ್ರಮದ ಕುರಿತು ಜನತೆಗೆ ಅರಿವು ಮೂಡಿಸುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಮೂಲಕ ಪಾಲಕರಿಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ. ಆ ಮೂಲಕ ಸಮಾಜಕ್ಕೆ ಮಾಹಿತಿ ತಲುಪಿಸುವ ಕೆಲಸ ಮಾಡುತ್ತಿರುವುದಾಗಿ ನುಡಿದರು.
ಆರೋಗ್ಯ ನಿರೀಕ್ಷಕ ರಾಘವೇಂದ್ರ ಮಾತನಾಡಿ, ಸಾರ್ವಜನಿಕರು ನಮ್ಮ ಮನೆ ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಕರ ಜೀವನ ನಡೆಸಲು ಪೂರಕವಾದ ವಾತಾವರಣ ಸೃಷ್ಟಿ ನಮ್ಮಿಂದಲೇ ಸಾಧ್ಯ ಎಂದ ಅವರು, ಸ್ಪಚ್ಚತೆಗೆಒತ್ತು ನೀಡಿ ರೋಗ ತಾನಾಗಿಯೇ ದೂರಾಗುತ್ತದೆ ಎಂದರು.
ಸೂಲೂರು ಶಾಲೆಯ ಶಿಕ್ಷಕ ಡಿ.ಎ.ರಾಜಣ್ಣ ಮಾತನಾಡಿ, ಮನುಷ್ಯರಿಗೆ ಆರೋಗ್ಯ ಎಂಬುದು ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ರೋಗಗಳು ಪತ್ತೆಯಾಗುತ್ತಿದೆ ಇದರ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ಪ್ರತಿಯೊಬ್ಬರು ಸಹ ತಮ್ಮ ಜವಾಬ್ದಾರಿಯನ್ನು ಅರಿತು ರೋಗದಿಂದ ದೂರವಿರಿ. ಮನೆಯಲ್ಲಿ ಇರುವ ನೀರಿನ ತೊಟ್ಟಿಗಳು, ಡ್ರಂಗಳು ಮತ್ತು ಸಿಂಟೆಕ್ಸ್ಗಳನ್ನು ಕನಿಷ್ಠ ವಾರಕ್ಕೆ ಒಂದು ಬಾರಿ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ಎಸೆದಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸುವುದು. ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವವರು, ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಸೊಳ್ಳೆ ಪರದೆಯನ್ನು ಬಳಸಬೇಕು ಎಂದರು.
ನರಸಾಪುರ ಕೆಪಿಎಸ್ ಶಾಲೆ ಮುಖ್ಯಶಿಕ್ಷಕ ಗೋಪಿನಾಥ್, ಅರಾಭಿಕೊತ್ತನೂರು ಶಾಲೆ ಶಿಕ್ಷಕ ಎಂ.ಆರ್.ಗೋಪಾಲಕೃಷ್ಣ, ಸೂಲೂರು ಪ್ರೌಢಶಾಲೆ ಶಿಕ್ಷಕರಾದ ಟಿ.ಸುಮಾ, ಎಂ.ಮಂಜುಳಾ, ಬಿ.ಸುಮಲತಾ, ಆರ್.ಆನಂದಕುಮಾರ್, ಮಾರುತಿ ಮತ್ತಿತರರು ಇದ್ದರು.