ಜಾವೆಲಿನ್ ಎಸೆತದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅಭಿನಂದಿಸಿದರು. ಡಾ.ಸಿ.ರಾಮರಾವ್, ಸಂಜೀವಕುಮಾರ ನಾಯಿಕ ಇತರರಿದ್ದರು. 
ಜಿಲ್ಲೆ

ಜಾವೆಲಿನ್ ಎಸೆತದಲ್ಲಿ ವಿದ್ಯಾರ್ಥಿಗಳ ಸಾಧನೆ

ಬೆಳಗಾವಿ: ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ಪ್ರಥಮ ರಾಷ್ಟ್ರೀಯ ಜಾವೆಲಿನ್ ಡೇ ನಿಮಿತ್ತ ಬೆಂಗಳೂರಿನಲ್ಲಿ ಇತ್ತಿಚೇಗೆ ಜರುಗಿದ ರಾಜ್ಯಮಟ್ಟದ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ರಾಜ್ಯಮಟ್ಟದ ಜಾವೆಲಿನ್ ಸ್ಪರ್ಧೆಯಲ್ಲಿ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಶಾಂಕ ಪಾಟೀಲ 60 ಮೀಟರ್ ಎಸೆದು ಪ್ರಥಮ ಹಾಗೂ ಪ್ರಥಮ ಪಿಯುಸಿಯ ಶಿವಮಣಿ ಸಿ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸೋಮವಾರ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸಿ.ರಾಮರಾವ್ ಹಾಗೂ ಅಥ್ಲೆಟಿಕ್ಸ್ ಕೋಚ್ ಸಂಜೀವಕುಮಾರ ನಾಯಿಕ ಇತರರಿದ್ದರು.